ವಿಜಯಪುರ: 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮುದ್ರಣ ಹಾಗೂ ವಿದ್ಯುನ್ಮಾನ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಪತ್ರಕರ್ತರು ಬರೆದ ವರದಿ, ಲೇಖನ, ಸುದ್ದಿಛಾಯಾಚಿತ್ರ ಹಾಗೂ ವಿಡಿಯೊ ಕ್ಲಿಪ್ಪಿಂಗ್ ಅರ್ಜಿಯೊಂದಿಗೆ ಕಳುಹಿಸಬಹುದಾಗಿದೆ.
ಅತ್ಯುತ್ತಮ ಮಾನವೀಯ ವರದಿ, ಗ್ರಾಮೀಣ ವರದಿ, ಕ್ರೀಡಾ ವರದಿ ಸೇರಿದಂತೆ ಹಲವು ಆಯಾಮಗಳಲ್ಲಿ ಬರೆದಿರುವ ವಿಶೇಷ ವರದಿ ಹಾಗೂ ಲೇಖನಗಳನ್ನು ಮುದ್ರಣ ಮಾಧ್ಯಮದ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯುನ್ಮಾನ ಮಾಧ್ಯಮದವರು ಅತ್ಯುತ್ತಮ ರಾಜಕೀಯ ವಿಶ್ಲೇಷಣೆ, ಅತ್ಯುತ್ತಮ ತನಿಖಾ ವರದಿ, ಸಾಮಾಜಿಕ ಮಾನವೀಯ ವರದಿ, ಅತ್ಯುತ್ತಮ ಆ್ಯಂಕರ್ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಶಸ್ತಿಗೆ 2022 ಜನವರಿ 1 ರಿಂದ 2022 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ, ವರದಿ, ವಿಶೇಷ ವರದಿ, ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು. ವರದಿ, ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು ಲೇಖನದ ಮುಖಪುಟದಲ್ಲಿ ಸ್ಪಷ್ಟವಾಗಿ ಬರೆಯಬೇಕು. ಅನುವಾದ ಮಾಡಿದ ವರದಿ, ಲೇಖನ ಪರಿಗಣಿಸುವುದಿಲ್ಲ.
ರಾಜ್ಯ ಸಂಘ, ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಲೇಖನ ವರದಿಗಳನ್ನು ಮೂರು ಪ್ರತಿಗಳಲ್ಲಿ (ಝರಾಕ್ಸ್ ಪ್ರತಿಗಳಾದರೆ ದೃಢೀಕೃತ ಪ್ರತಿ ಇರಬೇಕು.) ಕಳುಹಿಸಬೇಕು.
ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳ ಪ್ರವೇಶಕ್ಕೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್‌ಡ್ರೈವ್) ಮತ್ತು ಅದರ ಸ್ಕ್ರಿಪ್ಟ್‌ಗಳನ್ನು ಸಂಪಾದಕರ ದೃಢೀಕರಣ ಸಹಿತ ಕಳುಹಿಸಬೇಕು.
ಅರ್ಜಿ ಸಲ್ಲಿಸುವವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವದ ಗುರುತಿನ ಕಾರ್ಡ್ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ ಲಗತ್ತಿಸಬೇಕು.
ಲೇಖನದ ಜೊತೆಯಲ್ಲಿ ಸ್ವ ಪರಿಚಯ, ಪೂರ್ಣ ವಿಳಾಸ, ಮೊಬೈಲ್ ನಂಬರ್ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು. ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ.
ಮಾಧ್ಯಮದಲ್ಲಿ ಪ್ರಕಟ ಹಾಗೂ ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ, ಬೆಂಗಳೂರು-560009 ಇವರಿಗೆ ಅಕ್ಟೋಬರ್ 30ರೊಳಗಾಗಿ ತಲಪುವಂತೆ ಕಳುಹಿಸಲು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment