ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜನವರಿ ೨೭ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ ೧೫೦೦೦ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ವಾಟ್ಸಾಪ್ ಹಾಗೂ ಎಸ್.ಎಂ.ಎಸ್ ಮೂಲಕ ಮುಂಚಿತವಾಗಿ ತಿಳಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರು ನೋಂದಣಿ ಕಾರ್ಯಕ್ಕೆ ಕ್ರಮವಹಿಸಬೇಕು. ಉದ್ಯೋಗಾಕಾಂಕ್ಷಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೋಂದಣಿಗಾಗಿ ಸೃಜಿಸಲಾದ ಪೋರ್ಟಲ್ ಅಥವಾ ಲಿಂಕ್ ಬಗ್ಗೆ ವ್ಯಾಪಕ ಪ್ರಚಾರಗೊಳಿಸಬೇಕು. ಜಿಲ್ಲಾದಾದ್ಯಂತ ಇರುವ ವಿವಿಧ ಕಾಲೇಜುಗಳಿಗೆ ಮಾಹಿತಿ ನೀಡಬೇಕು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಮುಂಚಿತವಾಗಿ ಹಾಗೂ ಮೇಳದ ದಿನ ನೋಂದಣಿಗೆ ಅವಕಾಶ ಕಲ್ಪಿಸಬೇಕು.
ಉದ್ಯೋಗ ಮೇಳದ ಸ್ಥಳ,ವಿಳಾಸ ವಿವರ ಹಾಗೂ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ೧೩೦ ಉದ್ಯೋಗದಾತ ಕಂಪನಿಗಳು ಆಗಮಿಸುವ ಸಂಭವವಿರುವ ಹಿನ್ನೆಲೆಯಲ್ಲಿ ಆಯಾ ಕಂಪನಿಯ ಸಂದರ್ಶನ ಕೊಠಡಿ ಸೇರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ ಇಲ್ಲದೇ ಇರುವುದರಿಂದ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಸ್ಥಳೀಯ ಕಸ ವಿಲೇವಾರಿ ವಾಹನ ಮೂಲಕ, ಕರಪತ್ರ, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಪ್ರಚಾರ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಮೇಳದ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನೀರ್ವಹಿಸಬೇಕು ಉದ್ಯೋಗ ಮೇಳದಲ್ಲಿ ಯಾವುದೇ ಸಮಸ್ಯೆಬಾರದಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಿ ಯಾವುದೇ ಗೊಂದಲಗಳಿಗೆ ಪರಿಹಾರ ಸೂಚಿಸುವಚ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿ ಹಾಗೂ ಉಪ ಸಮಿತಿ ರಚಿಸಿದ್ದು ಸಮಿತಿಗೆ ವಹಿಸಿದ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಮೇಳದ ಸ್ಥಳದಲ್ಲಿ ಆಗಮನ,ನಿರ್ಗಮನ ನೋಂದಣಿ ಮಾಹಿತಿ ಮಾರ್ಗದರ್ಶನಕ್ಕೆ ಮಳಿಗೆಗಳು ಸ್ಥಾಪಿಸಿ ಯಾವುದೇ ಗೊಂದಲವಾಗದಂತೆ ನಿರ್ವಹಿಸಿ, ವೇದಿಕೆ ಸಿದ್ದತೆ ಅಗತ್ಯ ವೈದ್ಯಕೀಯ ವ್ಯವಸ್ಥೆ, ಅಂಬುಲೆನ್ಸ, ಅಗ್ನಿ ಶಾಮಕ ವಾಹನ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯP ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ ಸೌದಾಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮಹಾತೇಂಶ ಬಾಗೇವಾಡಿ ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಅಸೋಷಿಯೇಶನ್ ಅಧ್ಯಕ್ಷರಾದ ಎಸ್.ವಿ. ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾಗಳ ಅಧ್ಯಕ್ಷರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

