Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಕೀಯ ಉದ್ದೇಶದಿಂದ ವಿಶೇಷ ಅಧಿವೇಶನ ಸರಿಯಲ್ಲ
(ರಾಜ್ಯ ) ಜಿಲ್ಲೆ

ರಾಜಕೀಯ ಉದ್ದೇಶದಿಂದ ವಿಶೇಷ ಅಧಿವೇಶನ ಸರಿಯಲ್ಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ, ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ. ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.
ಈ ಗುರುವಾರ ಕುರಿತು ಪತ್ರಿಕಾ ಹೇಳಿಕೆಯ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿರುವ ಅವರು, ದಿ.೨೨ ರಿಂದ ದಿ.೩೧ ರವರೆಗೆ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಮುಂದಾಗಿದೆ, ರಾಜ್ಯದಲ್ಲಿ ಗಂಭೀರವಾದ ಸಮಸ್ಯೆಗಳಿವೆ, ಪ್ರಮುಖವಾಗಿ ಒಳ ಮೀಸಲಾತಿ ವಿಷಯವಾಗಿ ಆಗಿರುವ ಗೊಂದಲಗಳ ನಿವಾರಣೆಗಾಗಿ, ರಾಜ್ಯದಲ್ಲಿ ಖಾಲಿ ಇರುವ ೨.೭೩ ಲಕ್ಷ ಹುದ್ದೆ ಭರ್ತಿಯ ಬಗ್ಗೆ ಮಹತ್ವದ ತೀರ್ಮಾನ ಇರಿಸುವ ಬಗ್ಗೆ, ನೀರಾವರಿ ಯೋಜನೆಗಳ ಬಗ್ಗೆ ಹಾಗೂ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಚರ್ಚೆಗೆ ವಿಶೇಷ ಅಧಿವೇಶನ ಕರೆಯುವುದನ್ನು ಬಿಟ್ಟು ಯೋಜನೆ ಹೆಸರು ಬದಲಾವಣೆ ಯಾಗಿರುವ ಬಗ್ಗೆ ಖಂಡನಾ‌ ನಿರ್ಣಯ ಮಂಡಿಸಲು ವಿಶೇಷ ಅಧಿವೇಶನ ಕರೆಯುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಅಧಿವೇಶನದ ಆಶಯಗಳನ್ನೇ ಗಾಳಿಗೆ ತೂರುತ್ತಿದೆ.
ಈ ಹಿಂದೆಯೂ ವಿಶೇಷ ಅಧಿವೇಶನಗಳು ನಡೆದಿದ್ದವು,
ಉದಾಹರಣೆಗೆ ಅವಲೋಕಿಸುವುದಾದರೆ ೧೯೯೧ ರ ಡಿ.೧ ರಂದು ದಿ.ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕಾವೇರಿ ಸುಗ್ರೀವಾಜ್ಞೆ ಕಾವೇರಿ ವಿಷಯವಾಗಿ ಮಧ್ಯಂತರ ತೀರ್ಪು ವಿರೋಧಿಸಿ ಸುಗ್ರೀವಾಜ್ಞೆ ಹೊರಡಿಸಲು,
೧೯೯೭ ರ ಆಗಸ್ಟ್ ೨ ರಂದು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ವೇಳೆ
ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಕಲಾಪ, ಕಾವೇರಿ ಬಿಕ್ಕಟ್ಟು ವಿಷಯವಾಗಿ ನೀರು ಬಿಡಲು ಅಸಾಧ್ಯದ ನಿರ್ಣಯ ಮಂಡಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ಟೋಬರ್ ೩, ೨೦೦೨ ರಂದು, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ೨೦೦೬ ರ ಸೆ.೪ ರಂದು ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭಿಸುವ ನಿಟ್ಟಿನಲ್ಲಿ ಹೀಗೆ ಹಲವಾರು ಮಹತ್ವದ ಕಾರಣಗಳಿಗಾಗಿ ೧೧ ವಿಶೇಷ ಅಧಿವೇಶನಗಳು ನಡೆದಿವೆ, ಆದರೆ ಮಹತ್ವದ ಉದ್ದೇಶವಿಲ್ಲದೇ ನಡೆಯುತ್ತಿರುವ ಪ್ರಥಮ ಅಧಿವೇಶನ ಇದಾಗಿದೆ ಎಂಬುದು ತೋರುತ್ತಿದೆ.
ಒಳ ಮೀಸಲಾತಿ ಗೊಂದಲದಿಂದಾಗಿ ಖಾಲಿ ಹುದ್ದೆಗಳು ಭರ್ತಿಯಾಗುತ್ತಿಲ್ಲ, ಬಡ್ತಿ ಸೌಲಭ್ಯ ನಿಂತು ಹೋಗಿದೆ, ಶಿಕ್ಷಣ ಇಲಾಖೆಯಲ್ಲಿ ೬೯,೮೦೦ ಹುದ್ದೆ, ಆರೋಗ್ಯ ಇಲಾಖೆಯಲ್ಲಿ ೩೪ ಸಾವಿರಕ್ಕೂ ಅಧಿಕ ಹುದ್ದೆ ಖಾಲಿ ಇವೆ,
ರಾಜ್ಯದಲ್ಲಿ ಒಳ ಮೀಸಲಾತಿ ಗೊಂದಲ ನಿವಾರಣೆಗಾದರೂ ವಿಶೇಷ ಅಧಿವೇಶನ ಕರೆದರೆ ಸರ್ಕಾರದ‌ ನಡೆಯನ್ನು ನಾವು ಸ್ವಾಗತಿಸುತ್ತಿದ್ದೆವು, ನೀರಾವರಿ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿವೇಶನ ಕರೆಯಬೇಕಿತ್ತು, ಆದರೆ ಈ ಎಲ್ಲ ಮಹತ್ವದ ಅಂಶ ಬಿಟ್ಟು ರಾಜಕೀಯ ಹಠ ಸಾಧಿಸಿಕೊಳ್ಳಲು ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ ಎಂದು ಕಾರಜೋಳ ಹೇಳಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ

ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
    In (ರಾಜ್ಯ ) ಜಿಲ್ಲೆ
  • ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶುದ್ಧ ಕುಡಿವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಿರಲಿ
    In (ರಾಜ್ಯ ) ಜಿಲ್ಲೆ
  • ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರ ಕುಂದುಕೊರತೆ ಸಭೆ ಜೂ.೨೪ ಕ್ಕೆ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ಒತ್ತಡದ ಬದುಕಿಗೆ ಯೋಗ ಅವಶ್ಯಕ :ಶೇಗುಣಸಿ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ಯೋಗವು ಒಂದು ಸರ್ವ ಸಿದ್ದಿಸಾಧನ :ಉಷಾದೇವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.