Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
(ರಾಜ್ಯ ) ಜಿಲ್ಲೆ

ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಬಂಗಾರ ಆಭರಣಗಳ ತಯಾರಕರು ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ಸೋಮಶೇಖರ ಬಿರಾದಾರ ಆರೋಪ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕಾನೂನನ್ನು ರಕ್ಷಿಸಬೇಕಾದ ಪೊಲೀಸರೇ ಭಕ್ಷಕರಾಗುತ್ತಿದ್ದಾರೆ, ಸುಖಾ ಸುಮ್ನೆ ಬಂಗಾರ ಅಂಗಡಿಗಳ ಮಾಲೀಕನ ಮೇಲೆ ಸಿಂದಗಿ ಹಾಗೂ ಆಲಮೇಲ ಪೊಲೀಸರು ಹಲ್ಲೆ ನಡೆಸಿ ಯುವಕನ ಹಲ್ಲು ಮುರಿದಿದ್ದಾರೆ. ಮಾಡದ ತಪ್ಪನ್ನು ಮಾಡಿದ್ದೇನೆ ಒಪ್ಪಿಕೋ ಎಂದು ಧಮ್ಕಿ ಹಾಕುತ್ತಿದ್ದಾರೆ ಎಂದು ಇಂಡಿ ಬಂಗಾರ ಆಭರಣಗಳ ತಯಾರಕರು ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ಸೋಮಶೇಖರ ಬಿರಾದಾರ ಆರೋಪಿಸಿದರು.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸರು ಮಾಹಿತಿ ನೀಡದೆ ನೋಟಿಸ್ ಜಾರಿಗೊಳಿಸದೆ ತಮ್ಮ ಸಮವಸ್ತ್ರದಲ್ಲಿಯೂ ಬರದೆ ಖಾಸಗಿ ವಾಹನದಲ್ಲಿ ಬಂದು ಒಬ್ಬ ಬಂಗಾರ ಅಂಗಡಿಯ ಮಾಲೀಕನನ್ನು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಂಬಿಸಿದ್ದಲ್ಲದೆ ತಮಗೆ ಮನಬಂದಂತೆ ಥಳಿಸಿದ್ದಾರೆ. ಕಳ್ಳತನದ ಬಂಗಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದರೂ ನೀನು ತೆಗೆದುಕೊಂಡಿಲ್ಲವಾದರೂ ಸಹ ತೆಗೆದುಕೊಂಡಿದ್ದೇನೆ ಎಂದು ಒಪ್ಪಿಕೋ. ಇಲ್ಲವಾದಲ್ಲಿ ನಿನ್ನ ಮೇಲೆ ಪ್ರಕರಣ ದಾಖಲಿಸಿ ಒದ್ದು ಒಳಗೆ ಹಾಕುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದರು.
ಇಂಡಿ ಡಿವೈಎಸ್‌ಪಿ ಸದಾಶಿವ ಕಟ್ಟಿಮನಿ, ಸಿಂದಗಿ ಸಿಪಿಐ ನಾನಾಗೌಡ ಪೊಲೀಸ್ ಪಾಟೀಲ, ಆಲಮೇಲ ಪಿಎಸ್‌ಐ ಅರವಿಂದ ಅಂಗಡಿ, ಹಾಗೂ ಐದು ಜನ ಸಿಬ್ಬಂದಿ ಬಂಗಾರ ಅಂಗಡಿ ಮಾಲೀಕ ಮಹಾಂತೇಶ್ ಅರ್ಜುಣಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ, ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ಪ್ರಕರಣವನ್ನು ದಾಖಲಿಸಿಕೊಳ್ಳದೆ ಸಮಯ ವ್ಯಯಿಸುವ ಕಾರ್ಯ ಮಾಡಿದ್ದಾರೆ, ಬಂಗಾರ ಅಂಗಡಿಗಳ ಮಾಲೀಕರು ಹಾಗೂ ತಯಾರಕರ ಸಂಘದ ಸದಸ್ಯರು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಭೇಟಿ ಮಾಡಿ ನಡೆದ ಸಂಗತಿಗಳನ್ನು ತಿಳಿಸಿದ್ದೇವೆ, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ, ಕೂಡಲೆ ತನಿಖೆ ಆರಂಭಿಸಿ ತಪ್ಪಿತಸ್ಥ ಇಂಡಿ ಡಿವೈಎಸ್‌ಪಿ, ಸಿಂದಗಿ ಸಿಪಿಐ ಹಾಗೂ ಆಲಮೇಲ ಪಿಎಸಐ ಮತ್ತು ಐದು ಜನ ಪೊಲೀಸ್ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾವು ಕಾನೂನು ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪೊಲೀಸರು ಕಾನೂನು ವ್ಯವಸ್ಥೆಯಲ್ಲಿ ಬಂದು ತನಿಖೆ ಮಾಡಲಿ ತಮಗೆ ಕಾನೂನು ಅನ್ವಯಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಕೇವಲ ಬಡವರಿಗೆ ಮಧ್ಯಮ ವರ್ಗದವರಿಗೆ ಮಾತ್ರ ಕಾನೂನು ಅನ್ವಯಿಸುತ್ತದೆಯೋ ಹೇಗೆ ಅದನ್ನು ಪೊಲೀಸರೆ ತಿಳಿಸಬೇಕು ಎಂದು ಒತ್ತಾಯಿಸಿದರು.
ಸ್ವತಃ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ ಅವರು ಬಂಗಾರದ ಅಂಗಡಿಗಳಿಗೆ ತನಿಖೆಗೆ ಹೋಗಬೇಕಾದರೆ ಕಡ್ಡಾಯವಾಗಿ ಪೊಲೀಸರು ಅವರಿಗೆ ನೋಟಿಸ್ ಜಾರಿ ಮಾಡಿ, ಸಮವವಸ್ತç ಧರಿಸಿಕೊಂಡು, ಸರಕಾರಿ ವಾಹನದಲ್ಲೇ ಹೋಗಬೇಕೆಂದು ಆದೇಶಿಸಿದ್ದರೂ ಪೊಲೀಸ್ ಇಲಾಖೆ ಗೃಹ ಮಂತ್ರಿಗಳ ಆದೇಶಕ್ಕೇ ಬೆಲೆಯೇ ಕೊಡುತ್ತಿಲ್ಲ ಎಂದು ದೂರಿದರು.
ತನಿಖೆಯ ಸಂದರ್ಭದಲ್ಲಿ ಐದು ಬಿಳಿ ಖಾಲಿ ಹಾಳಿಗಳ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ. ಅಂಗಡಿ ಮಾಲೀಕನ ವಿರುಧ್ಧ ದೊಡ್ಡ ಶಡ್ಯಂತ್ರ ನಡೆದಿದೆ ಎಂದರು.
ಶ್ರೀಶೈಲ ಅರ್ಜುಣಗಿ, ಸಂದೀಪ ಧನಶೆಟ್ಟಿ, ನಾಮದೇವ ಡಾಂಗೆ, ವಿಜಯಕುಮಾರ ಮಹೇಂದ್ರಕರ, ಪ್ರಭು ಹೊಸಮನಿ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು
    In (ರಾಜ್ಯ ) ಜಿಲ್ಲೆ
  • ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
    In ವಿಶೇಷ ಲೇಖನ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.