ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಕೊಲ್ಹಾರ ತಾಲ್ಲೂಕು ಅಧ್ಯಕ್ಷರಾಗಿ ಪಟ್ಟಣದ ಸಚಿನ್ ಈಟಿ, ಉಪಾಧ್ಯಕ್ಷರಾಗಿ ಆನಂದ ಕುದುರಿ ಅವರನ್ನು ನೇಮಕ ಮಾಡಲಾಗಿದೆ.
ಸಂಘಟನೆಯ ರಾಜ್ಯಾಧ್ಯಕ್ಷರಾದ ಮತೀನ್ ಕುಮಾರ್ ಅವರ ಸೂಚನೆಯಂತೆ ವಿಜಯಪುರ ಜಿಲ್ಲಾ ಅಧ್ಯಕ್ಷ ಮಾರುತಿ ಕುದರಿ ಅವರು ನೇಮಕಾತಿ ಆದೇಶ ನೀಡಿದ್ದಾರೆ. ನೂತನ ಪದಾಧಿಕಾರಿಗಳು ಸಂಘಟನೆಯ ಗುರಿ–ಉದ್ದೇಶಗಳಿಗೆ ನಿಷ್ಠೆಯಿಂದ ಕೆಲಸ ಮಾಡಬೇಕು. ಶೋಷಿತ ಹಾಗೂ ಹಿಂದುಳಿದ ವರ್ಗಗಳ ಹಿತಾಸಕ್ತಿಗೆ ಧ್ವನಿಯಾಗುವ ಜೊತೆಗೆ, ಯಾವುದೇ ಆಮಿಷಗಳಿಗೆ ಒಳಗಾಗದೆ ಅನ್ಯಾಯದ ವಿರುದ್ಧ ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧ ಹೋರಾಟ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

