ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸ್ವಾತಂತ್ರ‍್ಯ ಹೋರಾಟದಲ್ಲಿ ಪಾಲ್ಗೊಂಡು, ಬಸವ ಶರಣರ ತತ್ವದ ಆಧಾರದಲ್ಲಿ ತಮ್ಮ ಬದುಕನ್ನು ನಡೆಸಿದ ಸರಳ ನಾಯಕ ಡಾ.ಭೀಮಣ್ಣ ಖಂಡ್ರೆ ಅವರು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಹಮ್ಮಿಕೊಂಡ ಬೀದರನ ಲೋಕ ನಾಯಕ, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಡಾ.ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನಲೆಯಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೀಮಣ್ಣ ಖಂಡ್ರೆ ಅವರು ತಮ್ಮ ಬದುಕನ್ನು ಬಡ ಜನತೆಗಾಗಿ ಮೀಸಲಿಟ್ಟಂತವರು. ಕರ್ನಾಟಕದ ಏಕೀಕರಣ ಚಳುವಳಿಯಲ್ಲಿಯೂ ಅವರ ಪಾತ್ರ ಹಿರಿಯದು. ಅವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿವೆ. ಖಂಡ್ರೆ ಅವರು ಸಮಾಜದ ಋಣ ತೀರಿಸಿ ಸಾರ್ಥಕ ಬದುಕನ್ನು ಸಾಗಿಸಿ ಇಂದು ನಮ್ಮನೇಲ್ಲ ಅಗಲಿದ್ದಾರೆ. ಅವರ ಆತ್ಮಕ್ಕೆ ಭಗವಂತ ಚಿರ ಶಾಂತಿಯನ್ನು ನೀಡಲಿ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ ಸುಂಬಡ, ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ನಾಯ್ಕೋಡಿ, ಬಸವರಾಜ ಬಾಗೇವಾಡಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಶಿವಣ್ಣ ಕೊಟರಗಸ್ತಿ, ಸಾಯಬಣ್ಣ ಪುರದಾಳ, ಅಂಬರೀಶ ಚೌಗಲೇ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಇತರರು ಇದ್ದರು.

