ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ವಿದ್ಯಾನಗರ ೪ನೇ ಕ್ರಾಸ್‌ನಲ್ಲಿ ಶನಿವಾರ ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳರು ಅಂದಾಜು ೮೦ಗ್ರಾಂ ಬಂಗಾರ, ೧೦೦ಗ್ರಾಂ ಬೆಳ್ಳಿ ಹಾಗೂ ೧ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಸಿದ್ದಲಿಂಗಯ್ಯ ಹಿರೇಮಠ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಳಿಗ್ಗೆ ಮನೆಗೆ ಬೀಗ ಹಾಕಿ ಕುಟುಂಬದ ಸದಸ್ಯರೆಲ್ಲ ಅಮಾವಾಸ್ಯೆ ನಿಮಿತ್ಯ ದೇವರಿಗೆ ಹೋಗಿದ್ದರು ಎನ್ನಲಾಗಿದೆ. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ ಅಂದಾಜು ೮೦ಗ್ರಾಂ ಬಂಗಾರ, ೧೦೦ಗ್ರಾಂ ಬೆಳ್ಳಿ ಹಾಗೂ ೧ಲಕ್ಷ ನಗದು ದೋಚಿ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಪಿಎಸ್‌ಐ ಆರೀಫ್ ಮುಷಾಪುರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಬೇಕು ಎನ್ನುವ ದಿಸೆಯಲ್ಲಿ ಕಳ್ಳರನ್ನು ಪತ್ತೆ ಹಚ್ಚುಲು ಸ್ವಾನದಳ ಮತ್ತು ಬೆರಳಚ್ಚು ವಿಭಾಗಕ್ಕೆ ಬರಲು ಮಾಹಿತಿ ನೀಡಲಾಗಿದೆ ಎಂದು ಪಿಎಸ್‌ಐ ಆರೀಫ್ ಮುಷಾಪುರಿ ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
