ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ನೀಡುವ ೨೦೨೬ ರ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ.
ಮಾಜಿ ಸಚಿವ ದಿ. ಎಂ.ಸಿ.ಮನಗೂಳಿ ಸ್ಮರಣಾರ್ಥ ನೀಡಲಾಗುವ ‘ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಯನ್ನು ಬೆಂಗಳೂರಿನ ಅಂಕಿತ ಪುಸ್ತಕ ಪ್ರಕಾಶನ ಆಯ್ಕೆಯಾಗಿದ್ದು ರೂ.೨೫ ಸಾವಿರ ನಗದು, ಪ್ರಶಸ್ತಿಫಲಕ ಒಳಗೊಂಡಿದೆ. ಅಂಕಿತ ಪ್ರಕಾಶನವು ಕಳೆದ ೩೦ವರ್ಷಗಳಲ್ಲಿ ಸಾವಿರಪುಸ್ತಕಗಳನ್ನು ಪ್ರಕಟಿಸಿದ್ದು ಬಹುದೊಡ್ಡ ಸಾಧನೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ.
ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಕಲಬುರಗಿಯ ಹಿರಿಯ ಸಾಹಿತಿ ಡಾ.ಶ್ರೀಶೈಲ ನಾಗರಾಳ ಅವರಿಗೆ ನೀಡಲು ತೀರ್ಮಾನಿಸಿದ್ದು ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಫೆಬ್ರವರಿ ಮೊದಲ ವಾರದದಲ್ಲಿ ಕಡಣಿಯಲ್ಲಿ ನಡೆಯುವ ೯ನೇ ವರ್ಷದ ಸಂಭ್ರಮ ಹಾಗೂ ೨೫ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್.ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


