ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸೇರಿದ ಸರ್ವೇ ನಂಬರ 596 ರ 5 ಎಕರೆ 30 ಗುಂಟೆ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣ ಭಸ್ಮವಾಗಿದೆ.
ಜಮೀನಿನಲ್ಲಿ ಹಾಯ್ದು ಹೋಗಿರುವ ವಿದ್ಯುತ್ ಕಂಬಗಳಲ್ಲಿನ ತಂತಿ ಇಳಿಬಿದ್ದಿರುವ ಪರಿಣಾಮ ಗಾಳಿಗೆ ಘರ್ಷಣೆ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನುತ್ತಾರೆ ಸ್ಥಳೀಯ ರೈತರು.
ರಾತ್ರಿ 9 ಘಂಟೆ ವೇಳೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಲು ಸ್ಥಳದಲ್ಲಿ ಇದ್ದ ಜನರು, ಯುವಕರು,ರೈತರು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ ಕೊನೆಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದರು.
ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ಹಾನಿ ಉಂಟಾಗಿದೆ, ಅಲ್ಲದೇ ಹೊಲದಲ್ಲಿರುವ ಪೈಪ್ ಗಳು, ಕೇಬಲ್ ಗಳು ಸಂಪೂರ್ಣ ಸುಟ್ಟು ಹೋಗಿವೆ.
ಹೊಲವನ್ನು ಮಾಡಿರುವ ರೈತ ಹಾಗೂ ಅವರ ಪತ್ನಿಯ ಗೋಳು ಜನರ ಕಣ್ಣಲ್ಲಿ ನೀರು ತರಿಸಿತು.

