ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಇನಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಅಸಿಸ್ಟಂಟ್ ಪ್ರೊಫೆಸರ್ ಮತ್ತು ನರ್ಸಿಂಗ್ ಸೈಕ್ಯಾಟ್ರಿಕ್ ವಿಭಾಗದ ಮುಖ್ಯಸ್ಥ ಡಾ. ಎಂ. ಬಿ. ತಡಲಗಿ ಅವರನ್ನು ಸರಕಾರ ಕರ್ನಾಟಕ ಶುಶ್ರೂಷ ಪರಿಷತ್ತಿನ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.
ಡಾ. ಎಂ. ಬಿ.ತಡಲಗಿ ಅವರನ್ನು ನಾಮನಿರ್ದೇಶನ ಮಾಡಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು ಅಭಿನಂದನೆ ಸಲ್ಲಿಸಿದ್ದಾರೆ.

