ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೩೧ ರವರೆಗೆ ವಿಸ್ತರಿಸಲಾಗಿದೆ.
ಬಿ.ಎಡ್ ಕಾಲೇಜುಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ದೂರವಾಣಿ ಸಂಖ್ಯೆ:೦೮೩೫೫೨-೨೯೫೫೨೩ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ, ವಿಜಯಪುರ (ಮೊ:೮೧೨೩೭೧೦೭೬೬), ಬಾಗೇವಾಡಿ (ಮೊ:೯೯೭೨೩೪೦೭೨೧) ಮುದ್ದೇಬಿಹಾಳ (ಮೊ:೮೭೨೨೪೪೫೫೨) ಸಿಂದಗಿ (ಮೊ:೯೦೩೫೫೫೮೬೦೯) ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
