ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನಲ್ಲಿ ೯ ಹಾಗೂ ೧೧ನೇ ತರಗತಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ ೭ರಂದು ನಡೆಯಲಿದೆ.
೯ನೇ ತರಗತಿ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಹಾಗೂ ೧೧ನೇ ತರಗತಿಯ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಆರ್.ಬಿ.ಪಿ.ಜಿ ಹಳಕಟ್ಟಿ ಹೈಸ್ಕೂಲಿನಲ್ಲಿ ಫೆ.೭ರ ಬೆಳಿಗ್ಗೆ ೧೧:೧೫ ರಿಂದ ಮಧ್ಯಾಹ್ನ ೧:೪೫ರವರೆಗೆ ನಡೆಯಲಿದ್ದು, ಪರೀಕ್ಷಾರ್ಥಿಗಳು ಅಂದು ಬೆಳಿಗ್ಗೆ ೧೦:೩೦ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.ಪ್ರವೇಶ ಪತ್ರಗಳನ್ನು ವೆಬ್ಸೈಟ್ ïhttps://cbseitms.nic.in/2025/nvsಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
