ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೫–೨೬ನೇ ಸಾಲಿಗೆ ಬೆಂಗಳೂರಿನ ಆಶೀರ್ವಾದ ನಿಯಮಿತ ಸಂಸ್ಥೆಯಲ್ಲಿ ಕೌಶಲ್ಯ ತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಈ ತರಬೇತಿಗೆ ಅರ್ಜಿಯನ್ನು ದಿನಾಂಕ ೩೧-೦೧-೨೦೨೬ರ ಒಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು ಹಾಗೂ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ೮ನೇ ತರಗತಿ, ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪಿಯುಸಿ ಉತ್ತೀರ್ಣರಾದ ಅಥವಾ ಪದವಿ ಉತ್ತೀರ್ಣ-ಅನುತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ ಕನಿಷ್ಠ ೧೮ ವರ್ಷ ಹಾಗೂ ಗರಿಷ್ಠ ೩೫ ವರ್ಷಗಳೊಳಗಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿ ಇರುವವರು ಈ ತರಬೇತಿಗೆ ಅರ್ಹರಲ್ಲ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ರಸ್ತೆ ವಿಜಯಪುರ–೫೮೬೧೦೯ ಇಲ್ಲಿಗೆ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ದೂ.೮೨೭೭೭೯೯೯೯೦ ಹಾಗೂ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ದೂ.೦೮೩೫೨-೨೯೫೫೨೩ ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
