ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಕಲಬುರ್ಗಿಯ ಶ್ರೀ ವಿ.ಜಿ.ಮಹಿಳಾ ಕಾಲೇಜು ಜ.೧೩ರಂದು ಆಯೋಜಿಸಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನದ ಆಧಾರದ ಮೇಲೆ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಕಾಲೇಜಿನ ವಿದ್ಯಾರ್ಥಿಗಳಾದ ಜಯಶ್ರೀ ಕೂಚಬಾಳ ಹಾಗೂ ಸಮೃದ್ಧಿ ಕೋಟ್ಯಾಳ ಅವರನ್ನು ಕರಾಅ ಮಹಿಳಾ ವಿವಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿ ಉತ್ತಮ ಸಾಧನೆ ಮಾಡಿ ವಿಶ್ವವಿದ್ಯಾಲಯ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

