ಕೊಲ್ಹಾರ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅ.೧೮ ರಂದು ಜರುಗಲಿರುವ ಚಿಗುರು ಕವಿಗೋಷ್ಠಿಯಲ್ಲಿ ತಾಲೂಕಿನ ಮುಳವಾಡ ಗ್ರಾಮದ ಖ್ಯಾತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಅವರು ಮುಖ್ಯ ಅತಿಥಿ ಸ್ಥಾನವನ್ನು ವಹಿಸಲಿದ್ದಾರೆಂದು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷ ಡಾ. ವಿಜಯಕುಮಾರಿ ಕರಿಕಲ್ ತಿಳಿಸಿದ್ದಾರೆ. ಪ.ಗು.ಸಿದ್ದಾಪುರವರು ಈಗಾಗಲೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮಕ್ಕಳಸಾಹಿತ್ಯದ ಕುರಿತು ಉಪನ್ಯಾಸ ನೀಡಿದ್ದಾರೆ. ಹಲವಾರು ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ಇವರ ಕವಿತೆಗಳು ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯ ಪಠ್ಯ ಪುಸ್ತಕದಲ್ಲಿ ಸ್ಥಾನ ಪಡೆದುಕೊಂಡಿವೆ.
Related Posts
Add A Comment