ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಅನುಗ್ರಹ ವ್ಹಿಜನ್ ಪೌಂಡೇಶನ್ ಟ್ರಸ್ಟ್ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಹಾಗೂ ರೈತಮಿತ್ರ ಕಾಶೀನಾಥ ಪತ್ತಾರ ಪೌಂಡೇಶನ್ ಮುತ್ತಗಿ ಇವರ ಸಂಯುಕ್ತ ಆಶ್ರಯದಲ್ಲಿ,77ನೇ ಗಣರಾಜ್ಯೋತ್ಸವದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ 26-01-2026 ಸೋಮವಾರ ಬೆಳಿಗ್ಗೆ 9-30 ರಿಂದ 3-00 ಗಂಟೆ ವರೆಗೆ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೀರಲದಿನ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಜಯಪುರ ನಗರದ ಡಾ,ಪ್ರಭುಗೌಡ.ಬಿ.ಎಲ್. (ಚಬನೂರ) ರವರ ಅನುಗ್ರಹ ಕಣ್ಣಿನ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞರು ಶಿಬಿರದಲ್ಲಿ ಭಾಗವಹಿಸಿ ನೇತ್ರ ತಪಾಸಣೆ ಮಾಡಲಿದ್ದಾರೆ.ಪ್ರತಿಯೊಬ್ಬ ಅರ್ಹ ರೋಗಿಯನ್ನು ವಿಜಯಪುರ ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಿ ಲೈನ್ಸ್ ಅಳವಡಿಸಲಾಗುವುದು.
ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ 9590064059,7353477283,9448759368, 8150804574, ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಡುವವರ 2 ಫೋಟೋ ಹಾಗೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಗೆ ತಿಳಿಸಿದ್ದಾರೆ.
