Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಂದುವರೆದ ಆರಕ್ಷಕರ ಬೇಟೆ: ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ
(ರಾಜ್ಯ ) ಜಿಲ್ಲೆ

ಮುಂದುವರೆದ ಆರಕ್ಷಕರ ಬೇಟೆ: ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಳೆದ ಎರಡು ದಿನಗಳ ಹಿಂದಷ್ಟೇ ಸೈಬರ್ ಪ್ರಕರಣಗಳನ್ನು ಬೇಧಿಸಿ ಕೋಟ್ಯಂತರ ರೂ. ಮೌಲ್ಯದ ನಗದು ಜಪ್ತು ಮಾಡಿಕೊಂಡು ನೊಂದವರಿಗೆ ಮರಳಿ ಒಪ್ಪಿಸುವ ಮೂಲಕ ಉತ್ತಮ ಕಾರ್ಯ ಮಾಡಿದ್ದ ವಿಜಯಪುರ ಪೊಲೀಸರು ಈಗ ಪುನ: ವಿವಿಧ ಬಂಗಾರ ಕಳ್ಳತನ, ಮೋಟಾರ್ ಬೈಕ್ ಕಳ್ಳತನ ಪ್ರಕರಣಗಳನ್ನು ಬೇಧಿಸಿ ಲಕ್ಷಾಂತರ ರೂ. ಮೌಲ್ಯದ ಬಂಗಾರ, ಮೋಟಾರ್ ಬೈಕ್ ಹಾಗೂ ಪೂರಕ ವಸ್ತುಗಳನ್ನು ಜಪ್ತು ಮಾಡಿಕೊಂಡಿದ್ದಾರೆ.
ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ ೪೮ ಬಂಗಾರ, ಮೋಟಾರ್ ಬೈಕ್ ಕಳುವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ೧೪ ಜನ ಅಂತರ ರಾಜ್ಯ ಹಾಗೂ ಅಂತರ ಜಿಲ್ಲಾ ಆರೋಪಿತರನ್ನು ಬಂಧಿಸಿ ಅವರಿಂದ ಅಂದಾಜು ೬೫ ಲಕ್ಷ ರೂ. ಮೌಲ್ಯದ ೪೨೬.೨ ಗ್ರಾಂ ಬಂಗಾರದ ಆಭರಣಗಳನ್ನು ಮತ್ತು ೨೦ ಲಕ್ಷ ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ೦೨ ಕಾರುಗಳನ್ನು ಹಾಗೂ ೩೯ ಮೋಟಾರ್ ಬೈಕ್ ಜಪ್ತು ಮಾಡಿಕೊಂಡಿದ್ದು, ಆರೋಪಿತರಿಂದ ೧,೧೭,೦೦,೦೦೦ ರೂ. ಮೌಲ್ಯದ ವಸ್ತಗಳನ್ನು ಸ್ವತ್ತುಗಳನ್ನು ಜಪ್ತು ಮಾಡಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಈ ಎಲ್ಲ ಪ್ರಕರಣ ಬೇಧಿಸುವಲ್ಲಿ ಇಲಾಖೆಯ ಸಿಬ್ಬಂದಿ ಪ್ರಯತ್ನ ಅನನ್ಯ, ಕಳೆದ ಕೆಲವು ದಿನಗಳಿಂದ ಸರಿಸುಮಾರು ೨ ಕೋಟಿ ರೂ.ಗಳಷ್ಟು ಮೌಲ್ಯದ ನಗದು ಹಾಗೂ ಬಂಗಾರವನ್ನು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮರಳಿ ನೀಡುವಲ್ಲಿ ಇಲಾಖೆ ಯಶಸ್ವಿಯಾಗಿದೆ ಎಂದರು.

ಬಸ್‌ನಲ್ಲಿ ಬಂಗಾರ ಕಳ್ಳತನ ಪ್ರಕರಣ: ಐವರ ಬಂಧನ

ಕಳೆದ ೨೦೨೫ ರ ಮೇ ೩೦ ರಂದು ವಿಜಯಪುರ-ತಾಳಿಕೋಟೆಗೆ ಬಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ಮಹಿಳೆಯ ಬಳಿ ಇದ್ದ ೬೫ ಗ್ರಾಂ ಚಿನ್ನಾಭರಣವನ್ನು ಮನಗೂಳಿ ಬಳಿ ಕಳ್ಳತನ ಮಾಡಿದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅರಕೇರಿ ಗ್ರಾಮದ ಪ್ರಕಾಶ ವೆಂಕಟೇಶ ಭೋಯ್ರ್, ಅಂಕುಶ ಸಾಹೇಬರಾವ್ ಜಾಧವ, ಗೋವರ್ಧನ ವಿಠ್ಠಲ ಪವಾರ, ರಜನಿ ಶಿವು ಭೋವಿ, ಮಂಜು ಪ್ರಶಾಂತ ಭೋಯ್ರ ಎಂದು ಗುರುತಿಸಲಾಗಿದೆ.
ಮನಗೂಳಿ, ತಿಕೋಟಾ, ದೇವರಹಿಪ್ಪರಗಿ, ಬಬಲೇಶ್ವರ, ಆದರ್ಶನಗರ, ಗೋಲಗುಂಬಜ್, ಹಾಗೂ ನಿಡಗುಂದಿ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದಂತೆ ಒಟ್ಟು ೦೮ ಪ್ರಕರಣಗಳಲ್ಲಿ ಕೃತ್ಯಕ್ಕೆ ಬಳಸಿದ ೦೧ ಕಾರು ಹಾಗೂ ಒಟ್ಟು ೪೨೬.೨ ಗ್ರಾಂ ಬಂಗಾರದ ಆಭರಣಗಳನ್ನು ಹೀಗೆ ಒಟ್ಟು ಅಂದಾಜು ೬೫ ಲಕ್ಷ ರೂ. ಮೌಲ್ಯದ ಮಾಲನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಆರೋಪಿತರ ಪತ್ತೆಗಾಗಿ ರಚನೆ ಮಾಡಲಾಗಿದ್ದ ವಿಶೇಷ ತನಿಖಾ ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಮನಗೂಳಿ ಗ್ರಾಮದ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ-೫೦ ರ ಹತ್ತಿರ ಮುಳವಾಡ ಕ್ರಾಸ್ನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಈ ಆರೋಪಿಗಳನ್ನು ಗುರುತಿಸಿದೆ, ಕಾರಿನಲ್ಲಿದ್ದ ಈ ಎಲ್ಲ ಆರೋಪಿಗಳಿಗೆ ಕಾರು ನಿಲ್ಲಿಸಿ ಎಂದು ಸೂಚನೆ ನೀಡಿದರೂ ಸಹ ನಿಲ್ಲಿಸದೇ ಇರುವ ಕಾರಣಕ್ಕೆ ಪೊಲೀಸರು ಸಹ ಕಾರನ್ನು ಹಿಂಬಾಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ವಿಚಾರಣೆ ನಡೆಸಿದಾಗ ಸತ್ಯಾಂಶ ಬಹಿರಂಗಗೊಂಡಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ವಿವರಿಸಿದರು.

ಬಂಗಾರ ನಾಣ್ಯದ ಹೆಸರಲ್ಲಿ ವಂಚನೆ
ನಾಲ್ವರ ಬಂಧನ
ಬಂಗಾರ ನಾಣ್ಯ ಎಂದು ನಂಬಿಸಿ ಲಕ್ಷಾಂತರ ರೂ. ಹಣ ಪಡೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷದ ಮೇ.೮ ರಂದು ಈ ಪ್ರಕರಣ ದಾಖಲಾಗಿದ್ದು, ನಕಲಿ ಬಂಗಾರ ನಾಣ್ಯಗಳನ್ನು ಅಸಲಿ ಎಂದು ಯಾಮಾರಿಸಿ ದೂರುದಾರರಿಂದ ೨೬ ಲಕ್ಷ ರೂ. ಹಣ ಪಡೆದುಕೊಂಡು ಮೋಸ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ವಿಜಯನಗರದ ಹಣಮಂತ ಉರ್ಫ್ ಸಂತೋಷ ಲಾಲ ಮಾನಪ್ಪ ಉರ್ಫ್ ಲಕ್ಷö್ಮಣ ಕೊರಚರ, ರಾಜಾ ಗೋವಿಂದ ಉರ್ಫ್ ವೆಂಕಟೇಶ ಕಾವಾಡಿ, ಹರೀಶ ಚೌಡಪ್ಪ ಕೊರಚರ, ಚೀರಂಜೀವಿ ದುರ್ಗಪ್ಪ ಕೊರಚರ ಎಂದು ಗುರುತಿಸಲಾಗಿದೆ. ಆರೋಪಿಗಳು ಮೋಸ ಮಾಡಿ ತೆಗೆದುಕೊಂಡು ಹೋದ ೨೦ ಲಕ್ಷ ನಗದು ಹಣವನ್ನು ಹಾಗೂ ಕೃತ್ಯಕ್ಕೆ ಬಳಸಿದ ೦೧ ಕಾರನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.

ಮೋಟಾರ್ ಬೈಕ್ ಕಳ್ಳತನ
ಮೂವರ ಬಂಧನ
ನಾಗಠಾಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ವಿವಿಧ ಬೈಕ್ ಕಳ್ಳತನದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಸಿದ್ರಾಮ ಅರಕೇರಿ, ಮಂಜುನಾಥ ಉಕ್ಕಲಿ, ಆಕಾಶ ಮಠಪತಿ ಎಂದು ಗುರುತಿಸಲಾಗಿದೆ. ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಮೋಟಾರ್ ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳಿಂದ ಒಟ್ಟು ೨೦ ಮೋಟಾರ ಸೈಕಲ್ಗಳನ್ನು ವಶಪಡಿಸಿಕೊಂಡಿದ್ದು ೭ ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.
ವಿಶೇಷ ಪೊಲೀಸ್ ತನಿಖಾ ತಂಡ ಅಲಿಯಾಬಾದ್ ಬಳಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಮೂವರು ವ್ಯಕ್ತಿಗಳು ಸಂಶಯಾಸ್ಪದವಾಗಿ ತಿರುಗಾಡುತ್ತಿರುವುದನ್ನು ನೋಡಿ ಅವರನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ.
ಎಎಸ್‌ಪಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಟಿ.ಎಸ್. ಸುಲ್ಫಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.