ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ‘ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಶಾಲಾ ಶಿಕ್ಷಣ ಇಲಾಖೆ ಸಿದ್ಧಪಡಿಸಿ ಹೊರಡಿಸಲಾದ 40 + ಅಂಕ ಪಡೆಯುವ ಕ್ರಿಯಾ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿ-ರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಹೇಳಿದರು.
ಸಂಗಮೇಶ್ವರ ಮಾಧ್ಯಮಿಕ ಶಾಲೆಯಲ್ಲಿ ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.
3 ಸರಣಿ ಪರೀಕ್ಷೆಯನ್ನು ಇಲಾಖೆ ಅನುಷ್ಠಾನಗೊಳಿಸಿದೆ. ಪ್ರತಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆಯುವ ಅಂಕದ ಮೇಲೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣ-ರಾಗುವಂತೆ ಮಾಡುವುದು ಶಿಕ್ಷಕರ
ಜವಾಬ್ದಾರಿ ಎಂದರು.
ವಿಷಯ ಪರಿವೀಕ್ಷಕಿ ಶೈಲಾ ಹಳೆಮನಿ ಮಾತನಾಡಿ, ನಿಧಾನಗತಿ ಕಲಿಕಾಮಟ್ಟವುಳ್ಳ ವಿದ್ಯಾರ್ಥಿಗಳನ್ನು ಉತ್ತೀರ್ಣ ಗೊಳಿಸುವದು ನಮ್ಮ ಮೊದಲ ಗುರಿ. ವಿವಿಧ ಕಲಿಕಾ ತಂತ್ರಗಳನ್ನು ಅಳವಡಿಸಿ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಶಿಕ್ಷಕರು ಪ್ರಯತ್ನಿಸಬೇಕು ಎಂದರು.
ಚಡಚಣದ ಸಂಗಮೇಶ್ವರ ಮಾಧ್ಯಮಿಕ ಶಾಲೆಯಲ್ಲಿ ಬುಧವಾರ ನಡೆದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಮಾತನಾಡಿದರು
ಅಧ್ಯಕ್ಷತೆ ವಹಿಸಿದ ಬಿಇಒ ಚಿದಾನಂತ ಕಟ್ಟಿಮನಿ ಮಾತನಾಡಿ, ಪರೀಕ್ಷೆಗಳು ಸುಗಮವಾಗಿ ನಡೆಯಲು ಶಾಲಾ ಮುಖ್ಯಸ್ಥರು ಪರೀಕ್ಷೆ ಕೇಂದ್ರಗಳಲ್ಲಿ ಸಿ.ಸಿಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಿ, ಸ್ವಚ್ಛತೆ, ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.
ಎಸ್. ಎಸ್. ಎಲ್.ಸಿ. ಪರೀಕ್ಷೆ ಫಲಿತಾಂಶ ಸುಧಾರಣೆ ಪ್ರೌಢಶಾಲಾ ಮುಖ್ಯ ಗುರುಗಳ
ಶಿಕ್ಷಣ ಸಂಯೋಜಕ ಎನ್.ಸಿನಖೇಡ ಪ್ರಾಸ್ತಾವಿಕ ಮಾತನಾಡಿ, ಪರೀಕ್ಷೆ ಸುಧಾರಣೆಗೆ ಇಲಾಖೆ ವತಿಯಿಂದ ಕೈಗೊಳ್ಳಲಾದಕ್ರಮಗಳ ಬಗ್ಗೆ ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ನಾಡಗೇರ,ಮುಖ್ಯ ಶಿಕ್ಷಕರಾದ ಎಸ್.ಐ.ಚನಗೊಂಡ, ಎಚ್.ಆರ್.ಬಗಲಿ,ರಾ.ಸಿ ಬಿರಾದಾರ ಇದ್ದರು.

