ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯಾವುದೇ ಕೆಲಸಕ್ಕೆ ಮುಂದಾದಾಗ ಸೋಲು ಎದುರಾಗುವುದು ಸಹಜ. ಸೋಲಿಗೆ ಎದೆಗುಂದದೆ ಸಾಧನೆಯತ್ತ ಮುನ್ನುಗ್ಗಬೇಕು. ಜೀವನದಲ್ಲಿ ಪ್ರಾಮಾಣಿಕತೆ, ಸಮಯಪಾಲನೆ, ವಿಶ್ವಾಸಾರ್ಹತೆ, ಸತತ ಪರಿಶ್ರಮ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದು ಬಂಜಾರಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಎಸ್.ಬಿ.ಪವಾರರವರು ಹೇಳಿದರು.
ಶುಕ್ರವಾರದಂದು ನಗರದ ಬಂಜಾರಾ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಶ್ರೀದೇವಿ ಕಡಿತೋಟ ಹಾಗೂ ಸಮರ್ಥ ಗವಂಡಿಯವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಮಾತನಾಡುತ್ತ. ನಮ್ಮ ಸಂಸ್ಥೆಯಲ್ಲಿ ಕಲಿತ ಅದೇಷ್ಟೋ ವಿದ್ಯಾರ್ಥಿಗಳು ಮೇಡಿಕಲ್, ಇಂಜೀನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪ್ರತಿಭಾ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಪ್ರವೇಶ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಮಾತನಾಡುತ್ತ. ಪೋಷಕರು ತಮ್ಮ ಆಸಕ್ತಿಗಳನ್ನು ಮಕ್ಕಳ ಮೇಲೆ ಹೇರಬೇಡಿ. ಮಕ್ಕಳ ಅಭಿರುಚಿ, ಆಸಕ್ತಿ, ಪರಿಣಿತಿ ಗುರುತಿಸಿ ಆ ಕ್ಷೇತ್ರದಲ್ಲಿ ಅವರು ಸಾಧನೆ ಮಾಡಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ತೇನಳ್ಳಿ, ಶಿವಕುಮಾರ ಮಳಗಿ, ಶಿವಕುಮಾರ ಬುಗಡೆ, ಎಂ.ಎಸ್.ನಿAಬರಗಿ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಎಲ್.ಚವ್ಹಾಣ್, ಸೋಮಶೇಖರ ರಾಠೋಡ ಸೇರಿದಂತೆ ಕಾಲೇಜಿನ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಉಪಸ್ಥಿತರಿದ್ದರು.

