ವಿಜಯಪುರ: ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ರವರು ಸೋಮವಾರ ಮತ್ತು ಮಂಗಳವಾರ 16 ಮತ್ತು 17ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಈ 16 ಸೋಮವಾರ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.
ನಂತರ ಜಿಲ್ಲೆಯಲ್ಲಿರುವ ವಿದ್ಯುತ್ ಲೋಡ್ ಸೆಡ್ಡಿಂಗ್ ಸಮಸ್ಯೆ,
ಮುಂದಿನ ಜನತಾದರ್ಶನ ನಿಗದಿ ಮಾಡುವುದು, ಹಾಗೂ ಕೋಟಿ ವೃಕ್ಷ ಅಭಿಯಾನ ಅಂಗವಾಗಿ ಹಮ್ಮಿಕೊಂಡಿರುವ ಮೆರತನ್ ಸಿದ್ಧತೆಗಳು ಹಾಗೂ ಇತರೆ ವಿಷಯಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಸಂಜೆ 6 ಗಂಟೆಗೆ
ಜ್ಞಾನಯೋಗಶ್ರಮಕ್ಕೆ ಭೇಟಿ ನೀಡಿ ಅಧ್ಯಕ್ಷರುಗಳು ಹಾಗೂ ಇತರ ಸ್ವಾಮೀಜಿಯವರೊಂದಿಗೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಕಾರ್ಯಕ್ರಮದ ಕುರಿತು ಚರ್ಚಿಸಲಿದ್ದಾರೆ.
ಈ 17 ಮಂಗಳವಾರ ಬೆಳಿಗ್ಗೆ 10 ರಿಂದ 1 ಗಂಟೆವರೆಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಭೇಟಿ ಮಾಡುವರು.
ನಂತರ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಿರಬೂರ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚಿಗೆ ನಿಧನರಾದ ಬಸನಗೌಡ ಪಾಟೀಲ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಅಲ್ಲಿಂದ ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Related Posts
Add A Comment