Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ನಿಖಿಲ್ ಕುಮಾರಸ್ವಾಮಿ ಪಣ
(ರಾಜ್ಯ ) ಜಿಲ್ಲೆ

ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ನಿಖಿಲ್ ಕುಮಾರಸ್ವಾಮಿ ಪಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಹೆಚ್.ಡಿ.ಕೋಟೆ: ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿಖಿಲ್ ಕುಮಾರಸ್ವಾಮಿ ಟೊಂಕಕಟ್ಟಿ ನಿಂತಿದ್ದಾರೆ. ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಭವಿಷ್ಯ ನುಡಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ 37ನೇ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಮೂರು ಬಾರಿ ಸೋತರೂ ಕುಗ್ಗದೆ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಾಮಾಣಿಕವಾದ ಹೋರಾಟವನ್ನು ಮಾಡುತ್ತಿರುವ ವ್ಯಕ್ತಿ. ಪಕ್ಷದಲ್ಲಿ ಇರುವ ಸ್ಥಾನ ಮಾನಗಳನ್ನು ಬಳಕೆ ಮಾಡಿಕೊಂಡು ಇಡೀ ರಾಜ್ಯವನ್ನು ಸುತ್ತಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಛಲವನ್ನು ಇಟ್ಟುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಎಂದು ತಿಳಿಸಿದರು.
ಹಿರಿಯ ಜೆಡಿಎಸ್ ಮುಖಂಡ ನರಸಿಂಹೇಗೌಡ ಮಾತನಾಡಿ ಚುನಾವಣೆ ಸೋಲಿನಿಂದ ಮನಸ್ಸಿಗೆ ನೋವಾಗಿದ್ದರು ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಪಕ್ಷ ಸಂಘಟನೆಯನ್ನು ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿಯವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ಹೆಚ್ ಡಿ ಕೋಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ. ರಾಜೇಂದ್ರ, ಸರಗೂರು ತಾಲೂಕು ಜೆಡಿಎಸ್ ಅಧ್ಯಕ್ಷ ಎಂ. ಗೋಪಾಲಸ್ವಾಮಿ, ಹಿರಿಯ ಮುಖಂಡ ಎಂ.ಡಿ. ಮಂಚಯ್ಯ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಕಾರ್ಯದರ್ಶಿ ನಂಜಪ್ಪ, ಸಂಘಟನಾ ಕಾರ್ಯದರ್ಶಿ ಯೋಗೇಶ್, ಚಕ್ಕಳ್ಳಿ ಕಾಲೋನಿ ಬೈರೇಗೌಡ, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಖಜಾಂಜಿ ಯೋಗೇಶ್ ಬೆಳಗನಹಳ್ಳಿ, ತಮ್ಮೇಗೌಡ, ಎಡತೊರೆ ವೆಂಕಟೇಶ್, ಕೃಷ್ಣಾಪುರ ಶಿವಯ್ಯ, ಸಿ.ಕಾಳಪ್ಪಾಜಿ ಭೋಗೇಶ್ವರ ಕಾಲೋನಿ, ಜವರೇಗೌಡ, ಪ್ರಕಾಶ್, ಸತ್ಯನಾರಾಯಣ, ಮಂಜು ದೇವಲಾಪುರ, ದೇವರಾಜು, ಕುಮಾರಸ್ವಾಮಿ ಅಭಿಮಾನಿ ಬಳಗದ ಸಂಘಟನಾ ಕಾರ್ಯದರ್ಶಿ ಜಗದೀಶ್ ಸಿ. ಆರ್, ಬೈರೇಗೌಡ, ಮಾದೇಗೌಡ, ತೇಜು ಸೇರಿದಂತೆ ಪಕ್ಷದ ಮುಖಂಡರು ಅಭಿಮಾನಿಗಳು ಹಾಜರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.