ಉದಯರಶ್ಮಿ ದಿನಪತ್ರಿಕೆ
ಚಡಚಣ: ಕ್ರೀಡೆಯಲ್ಲಿ ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾಪಟುಗಳು ಪೌಷ್ಟಿಕ ಆಹಾರ ಸೇವಿಸುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಹ ಮತ್ತು ಮನಸ್ಸು ಸದೃಢವಾಗಿರಲು ನಿಯಮಿತವಾಗಿ ಕ್ರೀಡಾಭ್ಯಾಸ ಮಾಡಬೇಕು ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಬಿರಾದಾರ ಸಲಹೆ ನೀಡಿದರು.
ಪಟ್ಟಣದ ಶ್ರೀ ಎಸ್‌ಎಸ್‌ಎಚ್ ಅಂತರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ಬರಡೋಲ ಕೆಪಿಎಸ್ ಪ್ರೌಢಶಾಲೆಯ ಪ್ರಾಚಾರ್ಯ ಸಿ.ಎ. ಚನಗೊಂಡ ಮಾತನಾಡಿ, ಕ್ರೀಡೆಗಳನ್ನು ಆಡುವುದರಿಂದ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಚಲನಶೀಲತೆ ವೃದ್ಧಿಯಾಗುತ್ತದೆ. ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಿಂಜರಿಕೆ ಹಾಗೂ ಕೀಳರಿಮೆಯನ್ನು ದೂರ ಮಾಡುವುದರ ಜೊತೆಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದರು.
ದೈಹಿಕ ಶಿಕ್ಷಕ ಜಿ.ಎಸ್. ಧಂದರಗಿ ಮಾತನಾಡಿದರು.
ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗಿಯಾಗಿ ತಮ್ಮ ತಮ್ಮ ಪ್ರತಿಭೆಯನ್ನು ತೋರಿದರು ಮತ್ತು ಪಾರಿತೋಷಕವನ್ನು ಪಡೆದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಂಕರ ಹಾವಿನಾಳ, ಶಾಲೆಯ ಮುಖ್ಯ ಶಿಕ್ಷಕಿ ನಿಜನಾ ಶ್ರೀನಿವಾಸ, ಓಂ ಶಾಲೆಯ ಮುಖ್ಯ ಶಿಕ್ಷಕ ಸುರೇಶ ಜಂತಿ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

