ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಸದನದಲ್ಲಿ ಸರ್ಕಾರದ ಭಾಷಣ ಓದದೇ ದೇಶದಲ್ಲಿ ಕರ್ನಾಟಕದ ರಾಜ್ಯಪಾಲರು ಹೊಸ ಫ್ಯಾಷನ್ ಆರಂಭಿದ್ದಾರೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಪರಿಸರದ ಸಿಲ್ವರ್ ಲೇಕ್ ನಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರು, ಕೇಂದ್ರ ಸರ್ಕಾರ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರು ತೆಗೆದು ಹಾಕುವ ಜೊತೆಗೆ ಗ್ರಾಮೀಣ ಜನರ ದುಡಿಯುವ ಹಕ್ಕನ್ನು ಕಿತ್ತುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು ತೆಗೆದು ಹಾಕಲಿ ನೋಡೋಣ ಎಂದು ಹರಿಹಾಯ್ದರು.
ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡುತ್ತಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಶೇ. 90 ರಷ್ಟು ಅನುದಾನದ ಸ್ಥಗಿತಗೊಳಿಸಿ, ಶೇ.60-40 ಅನುದಾನದ ಯೋಜನೆಗಳನ್ನು ಜಾರಿಗೆ ತಂರುವ ಮೂಲಕ ರಾಜ್ಯಗಳ ಮೇಲೆಯೇ ಭಾರ ಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಮಾಜಿ ಸಚಿವರಾದ ಎಸ್.ಆರ್. ಪಾಟೀಲ ಸಂದರ್ಭದಲ್ಲಿ ಉಪಸ್ಥಿತರಿದ್ದರು.

