ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಜಗತ್ತಿನ ಶಕ್ತಿ ಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಶೇ. ೫೫ ಯುವ ಜನರನ್ನು ಹೊಂದಿರುವ ಸಮೃದ್ಧ ದೇಶ ನಮ್ಮದಾಗಿದೆ ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ಧೆ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ೭೭ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತ ಜಗತ್ತಿಗೆ ಶ್ರೇಷ್ಠ ವಿಜ್ಞಾನಿಗಳನ್ನು, ಸಾಹಿತಿಗಳನ್ನು, ವೈದ್ಯರನ್ನು ನೀಡಿದೆ ನಾವೆಲ್ಲರೂ ಭಾರತಾಂಬೆಯ ಹೆಮ್ಮೆಯ ಮಕ್ಕಳು. ವಿಜ್ಞಾನ-ತಂತ್ರಜ್ಞಾನ, ಕೃಷಿ, ಬಾಹ್ಯಕಾಶ್, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಕೊಡುಗೆ ಅಪಾರ. ನಮ್ಮ ಐಐಟಿ, ವೈದ್ಯಕೀಯ-ತಾಂತ್ರಿಕ ಮಹಾವಿದ್ಯಾಲಯಗಳು ಅನೇಕ ಸಾಧಕರನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿವೆ ಎಂದರು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡಾ.ಅನೀಲ ಭೀ. ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಎ ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಬಿ.ಕಮತಿ, ಪಿಯುಸಿ ಪ್ರಾಚಾರ್ಯ ಪ್ರೊ.ಎಸ್. ಜೆ ಜೀರಗಾಳಿ, ಎನ್‌ಸಿಸಿ ಅಧಿಕಾರಿಗಳಾದ ಡಾ.ರಾಮಚಂದ್ರ ನಾಯಕ, ಎಸ್. ಎ. ಪಾಟೀಲ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ, ಪ್ರೊ.ಮುರಗೇಶ ಪಟ್ಟಣಶೆಟ್ಟಿ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು, ಡಾ.ಉಷಾದೇವಿ ಹಿರೇಮಠ, ಎನ್ ಎಸ್ ಎಸ್ ಅಧಿಕಾರಿಗಳು ಡಾ.ತರನ್ನುಮ್ ಜಬೀನ್ ಖಾನ್, ಡಾ ಮಿಲನ್ ರಾಠೋಡ್ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್ ಎಸ್ ಎಸ್, ಎನ್‌ಸಿಸಿ,ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ.ಧಾನೇಶ್ವರಿ ಮೂಲಿಮನಿ ಕಾರ್ಯಕ್ರಮವನ್ನು ನಿರೂಪಿಸಿದರು.

