ಉದಯರಶ್ಮಿ ದಿನಪತ್ರಿಕೆ
ಇಂಡಿ: ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗೆ ಶ್ರಮಿಸುತ್ತಿದ್ದು, ಮತಕ್ಷೇತ್ರದಲ್ಲಿ ಇನ್ನೂ ಆಗಬೇಕಾದ ಕಾರ್ಯಗಳನ್ನು ಶೀಘ್ರವೇ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕಾರಿ ವರ್ಗ ಉತ್ತಮ ಕಾರ್ಯ ಮಾಡುತ್ತಿರುವುದರಿಂದಲೇ ಸರಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುತ್ತಿವೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
ಅವರು ನಗರದ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆರಿಸಿದ್ದು, ಈಗಾಗಲೆ ಜನರಿಗೆ ೨೪*೭ ನೀರು ಒದಗಿಸಲಾಗುತ್ತಿದೆ. ತಾಲ;ಊಕಿನಲ್ಲಿ ಹತ್ತು ಹಲವು ಕಾಲೇಜುಗಳನ್ನು ತಂದು ಶೈಕ್ಷಣಿಕ ರಂಗದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅತ್ಯತ್ತಮವಾಗಿ ಪರೀಕ್ಷೆ ಬರೆಯಲು ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ. ಮುಂದಿನ ವರ್ಷ ಜಿಟಿಟಿಸಿ ಕಾಲೇಜು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಲಿಂಬೆ ಅಭಿವೃಧ್ಧಿ ಮಂಡಳಿ ಮುಖಾಂತರ ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೋಲ್ಡ ಸ್ಟೋರೇಜ್ ಸೇರಿದಂತೆ ಇನ್ನಿತರ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲೇ ಲಿಂಬೆ ಅಭಿವೃಧ್ಧಿ ಮಂಡಳಿಯಲ್ಲಿ ನಡೆದಿರುವ ಕಾರ್ಯಕ್ರಮಗಳು ಹಾಗೂ ಆಗಬೇಕಾದ ಕಾರ್ಯಗಳ ಕುರಿತು ಒಂದು ದಿನ ಸೆಮಿನಾರ್ ಮಾಡಲಾಗುವುದು ಎಂದು ತಿಳಿಸಿದರು.
ಕೈಗಾರಿಕೆ ಅಭಿವೃಧ್ದಿಗೆ ಸಂಬಂಧಿಸಿದಂತೆ ಕೈಗಾರಿಕೆ ಪ್ರದೇಶ ಅಭಿವೃಧ್ಧಿಪಡಿಸಲಾಗುತ್ತಿದೆ. ರೈಲು ನಿಲ್ದಾಣದ ಸಮೀಪವೇ ಜಾಗ ಮಾಡಿದ್ದರಿಂದ ಕೈಗಾರಿಕೆಗೆ ಅವಶ್ಯವಿರುವ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಮತ್ತು ರಫ್ತು ಮಾಡಲು ಅನುಕೂಲವಾಗಲಿದೆ ಎಂದರು.
ಕೇಂದ್ರ ಸರಕಾರ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ನಡೆಸುತ್ತಿದೆ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರಬಾರದು. ಜೆ.ಜೆ. ಎಂ ಕಾಮಗಾರಿಗೆ ಅನುದಾನ ನೀಡಿಲ್ಲ ಮತ್ತು ನರೇಗಾ ಯೋಜನೆಯ ಹೆಸರನ್ನು ಬದಲಿಸಿ ಅನುದಾನ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದರು.

