ಗಾಂಧಿ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಡಿಸಿ ಡಾ.ಆನಂದ.ಕೆ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಅವರು, ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ಕಾರ್ಯನಿರ್ವಹಿಸಿ, ನಮಗೆ ಸಂವಿಧಾನ ಕಲ್ಪಿಸಿರುವ ಮೂಲಭೂತ ಹಕ್ಕುಗಳಂತೆ ಅದರಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ಜಿಲ್ಲಾ ನಿರೂಪಣಾಧಿಕಾರಿ ನಿರದಮಲಾ ಸುರಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಶ್ರೀಮತಿ ಮಂಜುಳಾ ದುರಗನ್ನವರ, ವೈಷ್ಣವಿ, ರತ್ನಾಂಜಲಿ, ಮಿಥುನ ಬನಸೋಡೆ, ನಾಗೇಶ ಸೇರಿದಂತೆ ಪೀಟರ್ ಅಲೆಕ್ಸಾಂಡರ್, ಬಾಪುಗೌಡ ಪಾಟೀಲ ಶೇಗುಣಸಿ ಹಾಗೂ ನೇತಾಜಿ ಗಾಂಧಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ,ಸಿಬ್ಬಂದಿ ಸಾರ್ವಜನಿಕರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

