ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನಲ್ಲಿ 77ನೇ ಗಣರಾಜ್ಯೋತ್ಸವದ ರಾಷ್ಟ್ರ ದ್ವಜಾರೋಹಣವನ್ನು ಬ್ಯಾಂಕಿನ ಅಧ್ಯಕ್ಷರಾದ ಅರ್ಜುನ ಲಮಾಣಿ ಇವರು ನೆರವೇರಿಸಿದರು.
ರಾಷ್ಟ್ರದ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷ ಅರ್ಜುನ ಲಮಾಣಿ ಇಡೀ ಜಗತ್ತಿಗೆ ಮಾದರಿಯಾದ ನಮ್ಮ ಸಂವಿಧಾನ ನಮ್ಮೆಲ್ಲರಿಗೂ ಹೆಮ್ಮೆ. ಇಂತಹ ಪವಿತ್ರ ಸಂವಿಧಾನ ಸಂರಕ್ಷಿಸೋಣ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುತ್ತ ಸಂವಿಧಾನ ಪಾಲಿಸೋಣ ಎಂದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಬ್ಯಾಂಕಿನ ನಿರ್ದೇಶಕರಾದ ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಅರವಿಂದ ಭೋ ಹೂಗಾರ, ತಹಸೀಲ್ದಾರ್ ಪ್ರಶಾಂತ ಚನಗೊಂಡ, ಎಸ್ ಎಸ್ ಜುಬೇರ, ಬ್ಯಾಂಕಿನ ಪ್ರಧಾನ ವ್ಯವಸ್ಧಾಪಕರಾದ ಎಮ್ ಕೆ ಜೋಶಿ, ವ್ಯವಸ್ಧಾಪಕರಾದ ಸಿ.ಎಸ್.ಹಿರೇಮಠ ಹಾಗೂ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.

