ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕೌಟುಂಬಿಕ ಕಲಹ ಹಾಗೂ ಒತ್ತಡಗಳಿಂದ ತಮ್ಮ ಸಮಸ್ಯೆಗಳನ್ನು ನಿರ್ಲಕ್ಷಿಸಿ ಜೀವನವನ್ನು ಸಾಗಿಸುತ್ತಿರುವ ಮಹಿಳೆಯರ ಮನಸ್ಸನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಸಮಾಜ ಕಾರ್ಯಕರ್ತೆ ರಶ್ಮಿ ನೂಲಾನವರ ಹೇಳಿದರು.
ಸಿಂದಗಿ ತಾಲೂಕಿನ ರಾಂಪುರ ಪಿಎ ಗ್ರಾಮದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಶ್ರೀಧರ ವಿದ್ಯಾವರ್ಧಕ ಸಂಘ, ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಿಂದಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಸಂಗಮ ಸಮಾಜ ಸೇವಾ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರ ಏಳಿಗೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರವು ಒಂದು ಎಂದರು.
ಈ ವೇಳೆ ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಸಿಂತಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಸುನಿತಾ ಕಪ್ಪೆಣವರ ಮಾತನಾಡಿ, ನೊಂದು ಬರುವ ಮಹಿಳೆಯರಿಗೆ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರವು ಪೂರಕವಾಗಿದೆ. ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಕಾರ್ಯಪ್ರವೃತ್ತವಾಗಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಪರಿಹರಿಸಿಕೊಳ್ಳಬೇಕು. ಜೊತೆಗೆ ಹೆಣ್ಣು ಮಕ್ಕಳ ವಿಧ್ಯಾಭ್ಯಾಸಕ್ಕೆ ಸಮಾನತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಸಾಂತ್ವನ ಮಹಿಳಾ ಸಾಹಾಯವಾಣಿ ಕೇಂದ್ರದ ಸಮಾಜ ಕಾರ್ಯಕರ್ತೆ ವಿದ್ಯಾ ದೇಸಾಯಿ, ಸುರೇಕಾ ಬಂಡೆ, ಶಾಂತಾಬಯಿ ಬುಯ್ಯಾರ, ಶೀವಲಿಲಾ ಶಾಬಾದಿ, ಜ್ಯೋತಿ ಆನಗೊಂಡ ಸೇರಿದಂತೆ ಇತರರು ಇದ್ದರು.

