ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ವಕೀಲ ವೃತ್ತಿ ಕೇವಲ ಉದ್ಯೋಗವಲ್ಲ, ಇದು ನ್ಯಾಯ ವ್ಯವಸ್ಥೆಯ ಪ್ರಮುಖ ಕಂಬ ಎಂದು ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ ಜಿ. ಹೇಳಿದರು.
ಅವರು ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನೆಲೆ ಮಂಗಳವಾರ ಪಟ್ಟಣದ ನ್ಯಾಯಾಲಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
ವಕೀಲರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ನಾನು ಮಾಡುವೆ. ವಕೀಲರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ನಿರ್ಧಾರಗಳಿಗೆ ಅವಕಾಶ ನೀಡುವುದಿಲ್ಲ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ, ಜಾತಿಗೆ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಎಲ್ಲ ವಕೀಲರು ನನ್ನ ಕುಟುಂಬ ಎಂದು ಭಾವಿಸಿ ಅವರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಚುನಾವಣೆಗೂ ಪೂರ್ವದಲ್ಲಿ ಸಂಘದ ಸರ್ವ ಸದಸ್ಯರೊಂದಿಗೆ ಚರ್ಚಿಸಿ ಮತ ನೀಡುವ ಭರವಸೆ ನೀಡಿದರು.
ಹಿರಿಯ, ಕಿರಿಯ ಹಾಗೂ ಯುವ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

