ಉದಯರಶ್ಮಿ ದಿನಪತ್ರಿಕೆ
ಹೆಚ್ ಡಿ ಕೋಟೆ: ತಾಲೂಕಿನಲ್ಲಿ ಮತ್ತೆ ಕಾಡುಪ್ರಾಣಿಗಳ ಆತಂಕ ಶುರುವಾಗಿದೆ. ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು,
ಅದರ ಓಡಾಟವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಇದನ್ನು ನೋಡಿ ರೈತರು ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಮೂಲಕ ಜನ ಮತ್ತು ಜಾನುವಾರಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಸರಗೂರು ತಾಲೂಕಿನ ಬಂಡೀಪುರ ಅರಣ್ಯ ವಲಯ ವ್ಯಾಪ್ತಿಯಲ್ಲಿ ತಿಂಗಳ ಅಂತರದಲ್ಲೇ ನಾಲ್ವರ ಮೇಲೆ ಹುಲಿ ದಾಳಿ ನಡೆಸಿ ಮೂವರ ಬಲಿ ಪಡೆದಿತ್ತು. ಬಳಿಕ ಬಂಡೀಪುರ ಹಾಗೂ ನಾಗರಹೊಳೆ ಅರಣ್ಯದಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದಾದ ನಂತರ ಕಾಡುಪ್ರಾಣಿಗಳ ಹಾವಳಿ ಕಡಿಮೆಯಾಗಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವುದು ಜನರನ್ನು ಆತಂಕಕ್ಕೀಡುಮಾಡಿದೆ.

