ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಗೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.
ಗೋವಾದಲ್ಲಿ ಯೂತ್ ಗೇಮ್ಸ್ ಕೌನ್ಸಿಲಿಂಗ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ೧೪ ವರ್ಷದ ವಯೋಮಿತಿಯೊಳಗಿನ ವಿದ್ಯಾರ್ಥಿಗಳಾದ ಸಂಪತ ಶಿಂಧೆ, ಆರ್ಯ ಆರ್. ತನಿಷ್ ಪಾಟೀಲ್, ಸುಮಂಜಿತ್ ಪವಾರ, ಪ್ರೀತಮ್ ಬೆಳ್ಯಾಳ, ಮತ್ತು ೧೭ ವರ್ಷದ ವಯೋಮಿತಿಯೊಳಗಿನ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಅಸ್ಕಿ, ಕಾರ್ತಿಕ್ ತಿಮ್ಮಾಪುರ್ ಈ ವಿದ್ಯಾರ್ಥಿಗಳು ಭಾಗಿಯಾಗಿ ಪ್ರಥಮ ಸ್ಥಾನ ಪಡೆದ ಹಿನ್ನೆಲೆ ಬರುವ ದಿನಗಳಲ್ಲಿ ನೇಪಾಳದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಿಕೊಂಡು ಸಾಧನೆ ಗೈದಿದ್ದಾರೆ.
ಇವರ ಸಾಧನೆಗೆ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಸಿ.ಕೆರೂರ ಸೇರಿದಂತೆ ಶಾಲೆಯ ಎಸ್.ಡಿ.ಎಂ.ಸಿ ಪದಾಧಿಖಾರಿಗಳು, ಸರ್ವ ಸದಸ್ಯರು, ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.

