Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಸಿಗೆಯಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ
(ರಾಜ್ಯ ) ಜಿಲ್ಲೆ

ಬೇಸಿಗೆಯಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ | ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕಾಲುವೆ ಜಾಲಗಳ ಮೂಲಕ ಕೆರೆ ತುಂಬಿಸುವ ಸಂದರ್ಭದಲ್ಲಿ ಕುಡಿಯುವ ನೀರು ಅನ್ಯ ಕಾರ್ಯಕ್ಕೆ ಬಳಕೆ ಹಾಗೂ ನೀರು ಪೋಲಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರ,ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಗುರುವಾರ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜೂನ್‌ವರೆಗೆ ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬೇಸಿಗೆಯಲ್ಲಿ ಯಾವುದೇ ನೀರಿನ ಅಭಾವವಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿವಾತವಾಗಿ ತಿಳಿದುಕೊಂಡು ಮಾಹಿತಿ ಸಲ್ಲಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್ ಬಳಕೆ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ನಗರ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತಾ ಕ್ರಮವಹಿಸಿಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಯಾವುದೇ ಅಡೆ-ತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ತಂಡವಾಗಿ ಸೂಕ್ಷ್ಮ ಯೋಜನೆ ರೂಪಿಸಿಕೊಂಡು ಕಾರ್ಯತತ್ಪರವಾಗಿರಬೇಕು.ಗ್ರಾಮ ಪಂಚಾಯತಿಯ ಹಂತದಲ್ಲಿಯೂ ಅಗತ್ಯ ಮಾಹಿತಿ ಕ್ರೋಢೀಕರಿಸಿ, ಆದಷ್ಟು ಟ್ಯಾಂಕರ್ ಬಳಕೆಯಾಗದಂತೆ ನೋಡುಕೊಳ್ಳಿ, ಬಹುಹಳ್ಳಿ ಕುಡಿಯುವ ನೀರಿನ ಕೆರೆ ಸೇರಿದಂತೆ ಜಿಲ್ಲೆಯ ಕೆರೆ ತುಂಬಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ತಹಶೀಲ್ದಾರರು ತಮ್ಮ ಹಂತದಲ್ಲಿ ಈ ವಾರದಲ್ಲಿ ಸಭೆ ನಡೆಸಿ, ಬೇಸಿಗೆ ಸಂದರ್ಭದಲ್ಲಿ ಪ್ರತಿ ೧೫ದಿನಗಳೊಗೊಮ್ಮೆ ಸಭೆ ನಡೆಸಿ, ಗ್ರಾಮ ಮಟ್ಟದ ಸಮಸ್ಯೆ ಖುದ್ದಾಗಿ ಅರಿಯಬೇಕು ಸಭೆ ನಡೆಸಿದ ಮಾಹಿತಿ ಜಿಲ್ಲಾಡಳಿತಕ್ಕೆ ನೀಡಬೇಕು.ಪಿಡಿಒ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔಧ್ರಾಮ, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್,ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ, ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ವಿವಿಧ ತಾಲೂಕಿನ ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಜಿಲ್ಲೆಯಲ್ಲಿರುವ ಬೋರವೆಲ್ಗಳ ಮಾಹಿತಿ ಕ್ರೋಢಿಕರಿಸಬೇಕು. ಚಾಲ್ತಿಯಲ್ಲಿರುವ ಬೋರವೆಲ್‌ಗಳ ಪರಿಶೀಲನೆ ನಡೆಸಬೇಕು. ದುರಸ್ತಿ ಅವಶ್ಯಕತೆ ಇರುವ ಬೋರವೆಲ್‌ಗಳ ದುರಸ್ತಿಗೆ ಕ್ರಮ ವಹಿಸಬೇಕು. ಹೆಸ್ಕಾಂ ವಸತಿ ನಿಲಯಗಳಲ್ಲಿ ಕುಡಿಯುವ ನೀರಿನ ಬೋರವೆಲ್ ವಿದ್ಯುತ್ ಸಮಸ್ಯೆ ಇದ್ದಲ್ಲಿ ಹೆಸ್ಕಾಂದಿಂದ ಪರಿಹರಿಸಲು ಕ್ರಮ ವಹಿಸಬೇಕು.”

– ಡಾ.ಆನಂದ್. ಕೆ
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.