Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್!
(ರಾಜ್ಯ ) ಜಿಲ್ಲೆ

ಕಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಟ್ರಾನ್ಸಫರ್ ಸೇರಿ ಎಲ್ಲದರಲ್ಲೂ ಭ್ರಷ್ಟಾಚಾರ | ಬಹಿರಂಗವಾಗಿಯೇ ಕಮಿಷನ್ ದಂಧೆ | ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ಟ್ರಾನ್ಸಫರ್ ನಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ.
ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವುದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಇನಷ್ಟು ಕಮಿಷನ್ ಹಣ ಹೊರ ಬರಲಿದೆ ಎಂದು ಹೇಳಿದರು.
ಗುತ್ತಿಗೆದಾರರ ಸಂಘದವರು ನಮ್ಮ ಮೇಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿದ್ದರು. ಈಗ ಕಾಂಟ್ರಾಕ್ಟರ್ ಅಸೋಷಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಈ ಹಿಂದೆ ಇದೇ ವ್ಯಕ್ತಿ ಲಂಚ ಕೊಟ್ಟಿರುವ ಆರೋಪ ಬಂದಾಗ, ಆತ ನಾನು ಕಾಂಟ್ರಾಕ್ಟ್ ಮಾಡಿಲ್ಲ ಅಂತ ಹೇಳಿದರು.
ಕಾಂಟ್ರಾಕ್ಟರ್ ಮತ್ತು ಸರ್ಕಾರ ಒಂದಾಗಿ ರಾಜ್ಯ ಲೂಟಿ ಮಾಡಿದ್ದಾರೆ. ಅಕ್ರಮ ಹಣ ಸಂಗ್ರಹದ ಹಿನ್ನೆಲೆಯಲ್ಲಿ ಮನಿ ಲ್ಯಾಂಡರಿಂಗ್ ಆಕ್ಟನಲ್ಲಿ ಇಡಿ ತನಿಖೆ ಆಗಬೇಕು. ಭ್ರಷ್ಟಾಚಾರ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕಮಿಷನ್ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರಾದರೂ ನೋಡಿದ್ದೀರಾ ಅಂತ ಕೇಳಿದ್ದಾರೆ‌. ನಮ್ಮ ಸರ್ಕಾರದ ವಿರುದ್ದ 40% ಆರೋಪ ಮಾಡಿದಾಗ ನೀವು ನೋಡಿದ್ದೀರಾ? ಈ ಪ್ರಕರಣದಲ್ಲಿ ಮುಖ್ಯಮಂತ್ರಿಯ ಯಾವುದೇ ಪಾತ್ರ ಇಲ್ಲದಿದ್ದರೆ, ನೀವೇ ನೇಮಿಸಿರುವ ನ್ಯಾಯಮೂರ್ತಿ ಮಾಗಮೋಹನದಾಸ್ ಆಯೋಗಕ್ಕೆ ಈ ಪ್ರಕರಣ ನೀಡಬೇಕು. ಇಲ್ಲವೇ ಲೋಕಾಯುಕ್ತಕ್ಕೆ ನೀಡಬೇಕು. ಈ ಪ್ರಕರಣದ ಮೂಲ ಪತ್ತೆ ಆಗಬೇಕಾದರೆ ತನಿಖೆ ಆಗಬೇಕು ಎಂದು ಹೇಳಿದರು.
ಐದು ರಾಜ್ಯದ ಚುನಾವಣೆಗೆ ಎಟಿಎಂ ಥರಾ ಕೆಲಸ ಮಾಡುತ್ತಿರುವ ನೀವು ಭ್ರಷ್ಟಾಚಾರದ ವಿರುದ್ದ ಮಾತನಾಡುವ ನೈತಿಕತೆ ಇಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ರೂ.42 ಕೋಟಿ ಸಿಕ್ಕಿರುವುದಕ್ಕೂ ಸಿಎಂ ಭೇಟಿ ಮಾಡಿದ್ದಾರೆ. ಸೆಲೆಕ್ಟಿವ್ ಆಗಿ ಪೇಮೆಂಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದೇ ಭ್ರಷ್ಟಾಚಾರದ ಪುರಾವೆಯಾಗಿದೆ.
ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸರಿಪಡಿಸುವುದಾಗಿ ಹೇಳಿದ್ದಾರೆ. ಅಂದರೆ ಭ್ರಷ್ಟಾಚಾರ ನಡೆದಿದೆ ಎನ್ನುವುದು ಅವರು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.