Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಆಡಳಿತ ಯಂತ್ರದಲ್ಲಿ ಮಹಿಳಾ ನೌಕರರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಸರ್ಕಾರಿ ಆಡಳಿತ ಯಂತ್ರದಲ್ಲಿ ಮಹಿಳಾ ನೌಕರರ ಪಾತ್ರ ಅನನ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅಖಿಲ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರಿ ಆಡಳಿತ ಯಂತ್ರದಲ್ಲಿ ಮಹಿಳಾ ನೌಕರರ ಪಾತ್ರ ಪ್ರಮುಖ, ಮಹಿಳಾ ನೌಕರರ ಸಮಸ್ಯೆ ನಿವಾರಣೆಗಾಗಿ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ಅಸ್ತಿತ್ವಗೊಂಡಿದ್ದು ಪ್ರತಿ ಜಿಲ್ಲಾ ಕೇಂದ್ರಕ್ಕೂ ಭೇಟಿ ನೀಡಿ ಮಹಿಳಾ ನೌಕರರ ಜೊತೆ ಸಮಾಲೋಚನೆ ನಡೆಸುವ ಕಾರ್ಯ ನಡೆಸುವ ಜೊತೆಗೆ ಸದಸ್ಯತ್ವ ಅಭಿಯಾನಕ್ಕೂ ಆದ್ಯತೆ ನೀಡಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿಯೂ ಸಹ ಶೀಘ್ರದಲ್ಲಿಯೇ ಸಂಘದ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ಎಂದು ವಿಜಯಪುರದಲ್ಲಿ ಅಖಿಲ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆಡಳಿತ ಯಂತ್ರದಲ್ಲಿ ೨.೫ ಲಕ್ಷಕ್ಕೂ ಮಹಿಳಾ ನೌಕರರಿದ್ದಾರೆ, ಈ ಎಲ್ಲ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅವರ ಧ್ವನಿಯಾಗುವ ನಿಟ್ಟಿನಲ್ಲಿ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಭೇಟಿ ನೀಡಿ ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದ್ದು, ಸದಸ್ಯತ್ವ ಅಭಿಯಾನಕ್ಕೂ ಆದ್ಯತೆ ನೀಡಲಾಗಿದೆ ಎಂದರು.
ವಿಜಯಪುರದಲ್ಲಿಯೂ ಸಂಘಟನೆಯ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದೆ, ಇನ್ನೂ ಶೀಘ್ರದಲ್ಲಿಯೇ ವಿಜಯಪುರದಲ್ಲಿ ಸಮಾವೇಶ ಸಂಘಟಿಸಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಂಘದ ಕಾರ್ಯಚಟುವಟಿಕೆಗಳಿಗೆ ವೇಗ ನೀಡಲಾಗುವುದು ಎಂದರು.
ಮಹಿಳಾ ಸರ್ಕಾರಿ ನೌಕರರು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅದನ್ನು ಸಂಬಂಧಿಸಿದ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಅದನ್ನು ನಿವಾರಿಸುವುದು, ನೌಕರರಿಗೆ ತೊಂದರೆಯಾದರೆ ಅದಕ್ಕೆ ಪೂರಕವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಕಲ ರೀತಿಯಲ್ಲಿ ನೆರವು ನೀಡುವ ಕಾರ್ಯದ ಜೊತೆಗೆ ಮಹಿಳಾ ಸರ್ಕಾರಿ ನೌಕರರಿಗೆ ಹಕ್ಕು ಬಾಧ್ಯತೆಗಳ ಕುರಿತು ತಿಳಿವಳಿಕೆ ನೀಡಲು ರಾಜ್ಯ, ಜಿಲ್ಲಾ ಹಂತದ ಸಮಾವೇಶ, ವಿಚಾರ ಸಂಕಿರಣಗಳ ಆಯೋಜನೆ, ಕೆಸಿಎಸ್‌ಆರ್ ನಡತೆ ನಿಯಮಗಳ ಕುರಿತು ಅರಿವು ಮೂಡಿಸುವುದು ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಸಹಕಾರ ಸಂಘ, ಮಹಿಳಾ ಗೃಹ ನಿರ್ಮಾಣ ಮೊದಲಾದ ಯೋಜನೆಗಳನ್ನು ಭವಿಷ್ಯದಲ್ಲಿ ಕೈಗೊಳ್ಳುವ ನಿಟ್ಟಿನಲ್ಲಿ ಸಂಘಟನೆ ಕಾರ್ಯೋನ್ಮುಖವಾಗಲಿದೆ ಅನೇಕ ಧ್ಯೇಯೋದ್ದೇಶಗಳನ್ನು ಹೊಂದಿದೆ ಎಂದರು.
೮ ನೇ ವೇತನ ಆಯೋಗ ರಚನೆಗೆ ಹಕ್ಕೊತ್ತಾಯ
ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ಮಂಜೂರು ಮಾಡಿರುವುದು ಸ್ವಾಗತಾರ್ಹ, ಇದಕ್ಕೆ ನಾವು ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದೇವೆ, ಇನ್ನೂ ಸರ್ಕಾರ ಆಡಳಿತ ಯಂತ್ರದ ಭಾಗವಾಗಿರುವ ಸರ್ಕಾರಿ ನೌಕರರ ೮ ನೇ ವೇತನ ಆಯೋಗ ರಚನೆಗೆ ಅಸ್ತು ಎನ್ನುವ ಮೂಲಕ ನೌಕರರ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಸರ್ಕಾರಿ ನೌಕರರ ಪ್ರಮುಖವಾದ ಬೇಡಿಕೆಗಳಾದ ಮಾತೃತ್ವ ರಜೆಯನ್ನು ಒಂದು ವರ್ಷದವರೆಗೆ ವಿಸ್ತರಣೆ, ಗರ್ಭೀಣಿಯರಿಗೆ ಒಂದು ತಿಂಗಳು ವೇತನ ಸಹಿತ ರಜೆ ನೀಡುವುದು, ಮೇರಿ ದೇವಾಸಿಯಾ ಜನ್ಮದಿನವಾಗಿರುವ ಸೆಪ್ಟೆಂಬರ್ ೧೩ನ್ನು ಮಹಿಳಾ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡುವುದು, ಮಹಿಳಾ ನೌಕರರಿಗೆ ಹಬ್ಬದ ಮುಂಗಡವಾಗಿ ನೀಡುವ ವೇತನ ಪ್ರಮಾಣವನ್ನು ೫೦ ಸಾವಿರ ರೂ.ಗೆ ಏರಿಕೆ ಮಾಡುವುದು, ವಿದೇಶ ಪ್ರವಾಸದ ಮಂಜೂರಾತಿಯನ್ನು ೧೫ ದಿನಗಳೊಳಗಾಗಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಸಂಘಟನೆ ನಿರಂತರವಾಗಿ ಒತ್ತಾಯಿಸಲಿದೆ ಎಂದು ವಿವರಿಸಿದರು.
ಸಂಘಟನೆಯ ರಾಜ್ಯ ಕೋಶಾಧ್ಯಕ್ಷೆ ಡಾ.ವೀಣಾ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಎಂ.ಆಶಾರಾಣಿ, ಸಂಘಟನೆಯ ವಿಜಯಪುರ ಜಿಲ್ಲಾ ಘಟಕದ ಪ್ರಮುಖರಾದ ಮಡಿವಾಳಮ್ಮ ನಾಡಗೌಡ, ಜಿಲ್ಲಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಪದಾಧಿಕಾರಿಗಳ ನೇಮಕ

ಸಂಘಟನೆಯ ವಿಜಯಪುರ ಜಿಲ್ಲಾ ಘಟಕ ರಚಿಸಲಾಗಿದ್ದು, ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ಅಪರ್ಣಾ ಹಜೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹೇಮಾ ವಸ್ತ್ರದ, ಹಿರಿಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಮಡಿವಾಳಮ್ಮ ನಾಡಗೌಡ, ರೇಷ್ಮಾ ಸುತಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಇದೇ ವೇಳೆ‌ ಪ್ರಕಟಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.