Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ಪರಿಷ್ಕರಣೆ ಕಾರ್ಯ ಸಮರ್ಪಕ ನಡೆಸಲು ಆಗ್ರಹಿಸಿ ಬಿಜೆಪಿ ಮನವಿ
(ರಾಜ್ಯ ) ಜಿಲ್ಲೆ

ಮತದಾನ ಪರಿಷ್ಕರಣೆ ಕಾರ್ಯ ಸಮರ್ಪಕ ನಡೆಸಲು ಆಗ್ರಹಿಸಿ ಬಿಜೆಪಿ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ವ್ಯಾಪ್ತಿಯಲ್ಲಿ ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ, ಪ್ರತಿ ಮನೆ -ಮನೆಗೆ ತೆರಳಿ ಮತದಾನ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ನಿಯೋಜಿತ ಬೂತ್ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಚುನಾವಣೆ ಹಾಗೂ ಮತದಾನ ಪ್ರಜಾಪ್ರಭುತ್ವದ ಮಹತ್ವದ ಅಂಗಗಳು, ಮತದಾನದ ಹಕ್ಕನ್ನು ಖಾತ್ರಿಪಡಿಸುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಕಾರ್ಯ ಅತ್ಯಂತ ಮಹತ್ವ ಹಾಗೂ ಜವಾಬ್ದಾರಿಯುತ ಕಾರ್ಯವಾಗಿದೆ, ಈಗ ಸರ್ಚ್, ಐಡೆಂಟಿಟಿ ಹಾಗೂ ಮ್ಯಾಪಿಂಗ್ (ಸರ್) ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಾ ಆರಂಭಗೊಂಡಿದೆ, ಆದರೆ ಈ ಕಾರ್ಯಕ್ಕೆ ನಿಯೋಜಿತಗೊಂಡಿರುವ ಬಿಎಲ್‌ಓಗಳು ವಿವಿಧ ಬಡಾವಣೆಗಳ ಪ್ರತಿ ಮನೆ-ಮನೆಗೂ ಭೇಟಿ ನೀಡುತ್ತಿಲ್ಲ, ಪ್ರತಿ ಮನೆಗೂ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಣೆ, ಪರಿಷ್ಕರಣೆ ಮಾಡಬೇಕು ಎಂಬ ಸ್ಪಷ್ಟ ನಿರ್ದೇಶನವಿದೆ, ಈ ಕಾರ್ಯ ಸಮರ್ಪಕವಾಗಿ ನಡೆದಾಗ ಮಾತ್ರ ಮತದಾನ ಪಟ್ಟಿ ಪರಿಷ್ಕರಣೆಯ ಕಾರ್ಯ ಸಾಧ್ಯವಾಗುತ್ತದೆ, ಈ ಕಾರ್ಯಕ್ಕೆ ಆದ್ಯತೆ ನೀಡದೇ ಹೋದರೆ ಮತದಾರರ ಪಟ್ಟಿಯಲ್ಲಿ ದೋಷಗಳು ನುಸುಳುವ ಸಾಧ್ಯತೆ ದಟ್ಟವಾಗಿರುತ್ತವೆ, ಹೀಗಾಗಿ ಇದಕ್ಕೆ ಅವಕಾಶ ಕೊಡಬೇಡಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಈ ಪ್ರಕ್ರಿಯೆ ವಿವಿಧ ರಾಜಕೀಯ ಪಕ್ಷಗಳ ಸಮಕ್ಷಮದಲ್ಲಿಯೂ ನಡೆಯಬೇಕಾಗಿರುವುದು ಅಗತ್ಯವಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಜಯಪುರ ನಗರದಲ್ಲಿ ಬಿಎಲ್‌ಓ ಹಾಗೂ ಬಿಎಲ್‌ಎಗಳು ಪ್ರತಿ ಮನೆ-ಮನೆಗೂ ಭೇಟಿ ನೀಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು, ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು.
ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಈ ಪರಿಷ್ಕರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ನಿಯೋಜಿಸಲಾಗಿದೆ, ಅತ್ತ ಮಾರ್ಚ್ ತಿಂಗಳು ಸಮೀಪಿಸುತ್ತಿದ್ದು ಎರಡು ಕೆಲಸಗಳ ಒತ್ತಡದಿಂದ ಈ ನೌಕರರು ಬಳಲುವಂತಾಗಿದೆ, ಬೇರೆ ಯಾವ ಜಿಲ್ಲೆಯಲ್ಲಿ ಪಾಲಿಕೆ ನೌಕರರನ್ನು ಈ ಕಾರ್ಯಕ್ಕೆ ನಿಯೋಜಿಸಿಲ್ಲ, ಹೀಗಾಗಿ ಕೂಡಲೇ ಅವರನ್ನು ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಸಂಜಯ ಪಾಟೀಲ ಕನಮಡಿ, ಭೀಮಾಶಂಕರ ಹದನೂರ, ರಾಹುಲ್ ಜಾಧವ, ಭಾರತಿ ಬುಯ್ಯಾರ್ ಸಿದ್ದು ಮಲ್ಲಿಕಾರ್ಜುನ್ ಮಠ ಭರತ ಕೋಳಿ, ಬಸವರಾಜ್ ಬೈಚ್ಬಾಳ್. ವಿಜಯ ಜೋಶಿ. ಕಾಂತು ಶಿಂದೆ ರಾಜೇಶ್ ಥೌಸೆ ಪ್ರಭುಗೌಡ ಬಿರಾದರ್. ಮಂಜುನಾಥ್ ಮೀಸೆ ಚಿನ್ನು ಚಿನಗುಂಡಿ ಪಾಪು ಸಿಂಗ್ ರಜಪೂತ ಆನಂದ್ ಮುಚ್ಚಂಡಿ ಸಂಗಮೇಶ್ ಉಕ್ಲಿ ಸಂತೋಷ್ ಜಾದವ್ ರಾಜಶೇಖರ್ ಬಾಗಲಕೋಟ್ ಅಗಸರ್ ವಿಜಯ್ ಹಿರೇಮಠ್ ವಿನಾಯಕ ದಹಿಂಡಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.