ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಯಲ್ಲಿ ಸಿಂದಗಿ ತಾಲ್ಲೂಕಿನ ಚಿಕ್ಕ ಅಲ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಭೈರವ್ ಬನ್ನೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸತತ ನಾಲ್ಕು ವರ್ಷಗಳಿಂದ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿದ್ದಾರೆ.
ಶಿಕ್ಷಕರ ಈ ಕ್ರೀಡಾ ಸಾಧನೆಗೆ ಸಿಂದಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ್ ಯಡ್ರಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಐ ಎಸ್ ಟಕ್ಕೆ, ಗೋಲಗೇರಿ ಕ್ಲಸ್ಟರ್ ಸಿಆರ್ ಪಿ ಶರಣು ಚಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಾಂತಪ್ಪ ನಾಯ್ಕೋಡಿ, ಶಿಕ್ಷಕರಾದ ಸೈಪನ್ ನದಾಫ್, ಮಡಿವಾಳ ನಾಯ್ಕೋಡಿ ಸೇರಿದಂತೆ ಚಿಕ್ಕ ಅಲ್ಲಾಪುರ ಗ್ರಾಮಸ್ಥರು ಹಾಗೂ ಗೋಲಗೇರಿ ಕ್ಲಸ್ಟರ್ ನ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.

