ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತಾಲೂಕು ಮಕ್ಕಳ ಸಾಹಿತ್ಯ ಸಂಗಮ ಮತ್ತು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಗೆ ಮೈಸೂರಿನ ಅರಮನೆ ಆವರಣದ ಟೌನ್ ಹಾಲ್ ನಲ್ಲಿ ಜರುಗಿದ ಮೈಸೂರು ಉತ್ಸವ ಸಮಾರಂಭದಲ್ಲಿ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾನುವಾರ ಮೈಸೂರಿನ ಅರಮನೆಯ ಆವರಣದಲ್ಲಿ ಜರುಗಿದ ಮೈಸೂರು ಉತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಲಮೇಲನ ಶಿಕ್ಷಕ ಹಾಗೂ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ ವಿಶೇಷ ಆವ್ಹಾನಿತರಾಗಿ ಪಾಲ್ಗೊಂಡು ಉತ್ಸವವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಅವರ ಸಂಘಟನಾತ್ಮಕ ಚಟುವಟಿಕೆಗಳು, ಶೈಕ್ಷಣಿಕ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ವಿಜಯನಗರ ,ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ವತಿಯಿಂದ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಮೈಸೂರು ಜಿಲ್ಲಾ ಕ.ಸಾ.ಪ ದ ಉಪಾಧ್ಯಕ್ಷ ಡಾ.ತ್ಯಾಗರಾಜು ,ಸಂಸ್ಥೆಯ ಅಧ್ಯಕ್ಷ ಡಾ.ನಾಗರಾಜ ತಂಬ್ರಹಳ್ಳಿ ,ಲಿಲಾಧರ ನಾಯಕ್, ಸಾಹಿತಿ ವಿಮರ್ಶಕ ಡಾ.ಮಹೇಶ ರುದ್ರಕರ್ ,ಸಾಹಿತಿ ಗೀತಾ ಪಾಟೀಲ ಖ್ಯಾತ ಸಂಗೀತಗಾರರು ರವಿರಾಜ್ ಹಾಸು ,.ನೌ.ಸಂಘದ ಅಧ್ಯಕ್ಷ ಎ.ಎಚ್.ವಾಲಿಕಾರ ರವರು ಪ್ರಧಾನ ಮಾಡಿದರು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಮಕ್ಕಳ ಸಾಹಿತ್ಯ ಸಂಗಮದ ಪದಾಧಿಕಾರಿಗಳು,
ಶಿಕ್ಷಕರು ಹರ್ಷ ವ್ಯಕ್ತ ಪಡಿಸಿದರು.

