ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ ಸೆಮಿಫೈನಲ್ ಗೆ ಹತ್ತಿರ
ಶನಿವಾರ, ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ನಂತರ, ಭಾರತ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.
2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿರುವ ಆತಿಥೇಯ ಭಾರತ ತಂಡ ಸತತ ಮೂರನೇ ಗೆಲುವು ಸಾಧಿಸಿ ಅಜೇಯವಾಗಿ ಮುನ್ನುಗ್ಗುತ್ತಿದೆ.
ಇನ್ನು ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಅಜೇಯ 8ನೇ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮೇಲುಗೈ ಸಾಧಿಸಿದೆ.
ಪಾಕಿಸ್ತಾನ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶನದ ನಂತರ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು.
ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪ್ರಸ್ತುತ +1.821ರ ಅದ್ಭುತ ನೆಟ್ ರನ್‌ರೇಟ್ (NRR) ನೊಂದಿಗೆ ಮೂರು ಪಂದ್ಯಗಳಿಂದ ಆರು ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನ ತನ್ನದಾಗಿಸಿಕೊಂಡಿದೆ.

