ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲ್ಲೂಕಿನ ಜೇವೂರ ಗ್ರಾಮದ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಸವಂತ ವಾಘಮೋರೆ ಅವರು ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿಜಯಪುರ ಜಿಲ್ಲೆಯ ತಿಡಗುಂದಿ ಪಟ್ಟಣದ ಮಾನಸ ಗಂಗೋತ್ರಿ ಮಾದರಿ ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಫೆ. 8 ರಂದು ಭಾನುವಾರ ಬೆ. 10 ಗಂಟೆಗೆ ಆಯೋಜಿಸಿರುವ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಸಾವಿತ್ರಿಬಾಯಿ ಫುಲೆ ರವರ ಸ್ಮರಣಾರ್ಥ ಕೊಡಮಾಡುವ “ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಬಸವಂತ ವಾಘಮೋರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗಣಪತಿ ಕಾಂಬಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

