ಉದಯರಶ್ಮಿ ದಿನಪತ್ರಿಕೆ
ಚಡಚಣ : ವಿಜಯಪುರದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ಸಾವಿತ್ರಿಬಾಯಿ ಫುಲೆ / ಜ್ಯೋತಿಬಾ ಫುಲೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಚಡಚಣ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯ ಶಿಕ್ಷಕ ತುಕಾರಾಮ ಕೋಳಿ ಅವರು ಆಯ್ಕೆಯಾಗಿದ್ದಾರೆ.
ಅಕ್ಷರದವ್ವ ಎಂದೇ ಖ್ಯಾತರಾದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯ ಅಂಗವಾಗಿ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಇದೇ ಫೆ. 8ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸಗಂಗೋತ್ರಿ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ.ಎಸ್. ಕಾಂಬಳೆ ತಿಳಿಸಿದ್ದಾರೆ.
ಮಾಡಲಾಗುತ್ತಿದೆ ಎಂದು ಸಮಿತಿ ತಿಳಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆ, ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ, ಸಾಮಾಜಿಕ ಜಾಗೃತಿ ಹಾಗೂ ಶಿಸ್ತುಬದ್ಧ ಬದುಕಿನ ಮಹತ್ವವನ್ನು ಬೋಧಿಸುವ ಮೂಲಕ ಅವರು ಶಿಕ್ಷಕ ವೃತ್ತಿಗೆ ಗೌರವ ತಂದುಕೊಟ್ಟಿದ್ದಾರೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಶೈಕ್ಷಣಿಕ ಕಾರ್ಯಗಳನ್ನು ಮತ್ತು ಅವರ ಸೇವೆಯನ್ನು ಗುರುತಿಸಿ ಈ ಗೌರವ ಪ್ರದಾನದೊಂದಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶಿಕ್ಷಕ ತುಕಾರಾಮ.ಆರ್.ಕೋಳಿ ಅವರಿಗೆ ಚಡಚಣ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ಬಳಗ, ಮಿತ್ರರು,ಊರಿನ ಗಣ್ಯರು ಶುಭಾಶಯ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

