ಮುದ್ದೇಬಿಹಾಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಚೇರಿಯ ವತಿಯಿಂದ ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕೇಸಾಪುರ ಗ್ರಾಮದ ಸಿದ್ಧಾರ್ಥ ಪಬ್ಲಿಕ್ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಗೌತಮ ಕಾಳೆ ೮೦ಮೀ ಅಡತಡೆ ಓಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಾಲೆಯ ಮುಖ್ಯ ಗುರು ವಿನಾಯಕ ದೊಡಮನಿ ಸೇರಿದಂತೆ ಎಲ್ಲ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ರಾಜ್ಯದಲ್ಲಿಯೂ ಗೌತಮ್ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Related Posts
Add A Comment