ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಲೊಯಲಾ ಐ.ಟಿ.ಐ ಆವರದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳವನ್ನು ಮಾ.೯ ರಂದು ಬೆಳಗ್ಗೆ ೯ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಆಯೋಜಿಸಲಾಗಿದೆ.
ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ೨೦೨೬ನೇ ಸಾಲಿನಲ್ಲಿ ೨ನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಾಲ್ಕು ಪ್ರತಿಗಳ ರೆಸ್ಯೂಮ್, ಬಯೋಡೇಟಾ, ವಿದ್ಯಾರ್ಹತೆಯ ಎಲ್ಲಾ ದಾಖಲೆಗಳು ಹಾಗೂ ಪಾಸ್‌ಪೋರ್ಟ್ ಸೈಜ್ ಫೋಟೊಗಳೊಂದಿಗೆ ಮೇಳಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೮೪೪೭೯೩೭೦,೯೯೦೦೬೨೭೧೯೭ ಅನ್ನು ಸಂಪರ್ಕಿಸಬಹುದಾಗಿದೆ ಅಥವಾ ಹತ್ತಿರದ ಯಾವುದೇ ಸರ್ಕಾರಿ, ಅನುದಾನಿತ, ಖಾಸಗಿ ಐ.ಟಿ.ಐಗಳನ್ನು ಸಂಪರ್ಕಿಸಬಹುದು ಎಂದು ಸದಾಶಿವ ಹಿಟ್ನಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ,ಬಬಲೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
