Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
(ರಾಜ್ಯ ) ಜಿಲ್ಲೆ

ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರ್ವಜನಿಕರು-ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾ.೯ರಂದು ನಗರದಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಅಧಿಕಾರಿಗಳು ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭೀಮ ಗಾಯನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ ಜೀವನ, ಸಾಧನೆ ಸಮಾನತೆಯ ಹೋರಾಟ, ಅಸ್ಪಶ್ಯತೆ ನಿವಾರಣೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಅಂದು ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ, ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಅಭಿವ್ಯಕ್ತಿಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ ಎಂದು ಎಡಿಸಿ ಡಾ. ಔದ್ರಾಮ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.
ಚಿಂತಾಮಣಿಯ ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘ ಈವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು. ಡಾ. ಬಿ.ಆರ್. ಅಂಬೇಡ್ಕರ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಾ.೯ರಂದು ಭೀಮ ಗಾಯನ ನಡೆಯಲಿರುವುದರಿಂದ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಜನನಿಬಿಡ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸಲಾಗುವದು. ಕಾರ್ಯಕ್ರಮದ ಮೆರಗು ಹೆಚ್ಚಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮುಖಂಡರಾದ ಅಡಿವೆಪ್ಪ ಸಾಲಗಲ್, ಶ್ರೀನಾಥ ಪೂಜಾರಿ, ಭೀಮರಾಯ ಜಿಗಜಿಣಗಿ ಮಾತನಾಡಿದರು.
ಈ ಸಂದರ್ಭಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚವ್ಹಾಣ ಕೆ.ಕೆ.ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿವಾನಂದ ಬ್ಯಾಹಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಸ್ಯಾಸಕರಾದ ರುದ್ರಯ್ಯ ಸಿ.ಹಿರೇಮಠ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಸೇರಿದಂತೆ ಡಾ. ಎಂ.ಆರ್. ಗುರಿಕಾರ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೆಕರ್, ವಿದ್ಯಾವತಿ ಅಂಕಲಗಿ, ಪಿ.ಎಸ್. ರೋಣಿಹಾಳ, ಎಂ.ಆರ್ ದೊಡಮನಿ, ಕಿರಣ, ಶಂಕರಗೌಡ ಪಾಟೀಲ, ಅಭಿಷೇಕ ಪತ್ತಾರ, ಕಲಾವಿದರಾದ ರಂಗನಾಥ ಬತ್ತಾಸೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಾರ್ವಜನಿಕರು ಇದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಕಾರ್ಯಕ್ರಮದ ಮೊದಲಿಗೆ ಗೀತಗಾಯನದ ಮೂಲಕ ಸಭೆಗೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿ, ಸಲಹೆ ಸೂಚನೆ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ ವಂದಿಸಿದರು.

“ಮಾ.೯ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮದ ಯಶಸ್ಸಿಗಾಗಿ, ವಿವಿಧ ಇಲಾಖೆಯ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ, ಸಲಹೆ ಸೂಚನೆ ಅನುಸಾರ ನಿರ್ವಹಿಸಲಾಗುವುದು.”

– ಅಮರೇಶ ದೊಡಮನಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.