Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
(ರಾಜ್ಯ ) ಜಿಲ್ಲೆ

ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆ | ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ | ಡಿಸಿ ಡಾ.ಆನಂದ ಕೆ. ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ೩ ರಿಂದ ೬ ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಹೀಟ್ ಸ್ಟ್ರೋಕ್ ತಡೆಗಟ್ಟಲು ಮತ್ತು ತಗ್ಗಿಸಲು ಸಾರ್ವಜನಿಕರು ಗಮನ ಹರಿಸಬೇಕು ಎಂದವರು ತಿಳಿಸಿದ್ದಾರೆ.
ಗರಿಷ್ಠ ತಾಪಮಾನದ ಅವಧಿಯಲ್ಲಿ ಅದರಲ್ಲೂ ಮಧ್ಯಾಹ್ನ ೧೨ ರಿಂದ ೩ಗಂಟೆರವರೆಗೆ
ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು ಎಂದವರು ತಿಳಿಸಿದ್ದಾರೆ.
ಪೂರ್ವಾಹ್ನ ೧೧ ರಿಂದ ಸಂಜೆ ೪ ಗಂಟೆ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.
ಪ್ರಯಾಣದೊಟ್ಟಿಗೆ ಸಾಕಷ್ಟು ನೀರಿರಲಿ.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಪಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯ ಸೇವಿಸುವುದು ಬೇಡ. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು ಎಂದವರು ತಿಳಿಸಿದ್ದಾರೆ. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳು ಹಾಗೂ ಸಾಕುಪ್ರಾಣಿಗಳನ್ನು ಬಿಡಬೇಡಿ. ಮೂರ್ಚೆ ಅಥವಾ ಅನಾರೋಗ್ಯ ಎನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್ ಎಸ್ ಸೇವಿಸಬೇಕು.
ಹೆಚ್ಚಿನ ನೀರಿನಂಶ ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರು ಹೆಚ್ಚಾಗಿ ಸೇವಿಸಬೇಕು. ಜೊತೆಗೆ ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರುಡಿ. ಮನೆ ತಂಪಾಗಿರಿಸಲು ಪರದೆ, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ, ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್/ಗ್ಲೋಕೋಸ್, ಓಆರ್ ಎಸ್ ಒಳಗೊಂಡಿರುವ ಕಿಟ್ ಒಯ್ಯಬೇಕು.
ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (ಸನ್ ಸ್ಟ್ರೋಕ್) ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಯಿದೆ. ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನಡಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆ ಬಟ್ಟೆಯಿಂದ ಮೈಒರೆಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು ಎಂದವರು ತಿಳಿಸಿದ್ದಾರೆ.
ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ತಿಳಿಸಿದ್ದಾರೆ.

“ಈ ಬೇಸಿಗೆಯಲ್ಲಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವ ಅನಿವಾರ್ಯತೆಯಿದ್ದರೆ ರಕ್ಷಣೆಗಾಗಿ ಕನ್ನಡಕ, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆ ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ನಿಲ್ಲಿಸಬೇಕು.”

– ಡಾ.ಆನಂದ್ ಕೆ.
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.