ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಕಳೆದ ೧೫ ವರ್ಷಗಳಿಂದ ಪತ್ರಕರ್ತರಾಗಿ ಹಾಗೂ ಪತ್ರಿಕೆ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ಕಲಕೇರಿ ಗ್ರಾಮದ ಈರಣ್ಣ ಎಂ. ಝಳಕಿ ಅವರು ಗ್ರಾಮದ ಶ್ರೀಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠವು ಕೊಡಮಾಡುವ ೨೦೨೬ನೇ ಸಾಲಿನ “ಶ್ರೀ ಗುರು ಮರುಳಾರಾಧ್ಯ ಸಿರಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶ್ರೀಯುತರಿಗೆ ಪ್ರತ್ರಿಕಾ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಾ.೮ ರಂದು ಶ್ರೀಶೈಲ ಜಗದ್ಗುರುಗಳ ಸಾನಿಧ್ಯದಲ್ಲಿ ನಡೆಯುವ ಶ್ರೀಗುರು ಮರುಳಾರಾಧ್ಯರ ಅನುಭಾವ ಜಾತ್ರಾ ಮಹೋತ್ಸವ ಹಾಗೂ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು ಎಂದು ಶ್ರೀಮಠದ ಪೀಠಾಧಿಪತಿ ಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

