Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
(ರಾಜ್ಯ ) ಜಿಲ್ಲೆ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಹಿಂದೂಗಳ ಪ್ರಮುಖ ಹಬ್ಬವಾದ ರಂಗಿನಾಟದ ಪ್ರಮುಖ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ಶಾಸಕ ನಾಡಗೌಡರನ್ನು ಆಹ್ವಾನಿಸಿದ್ದರೂ ಅವರು ನಿರ್ಲಕ್ಷಿಸಿ ತೆರಳಿರುವ ಘಟನೆ ಪಟ್ಟಣದ ಹಿಂದೂ ಸಮಾಜ ಹಾಗೂ ವ್ಯಾಪಾರಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಕೇವಲ ಕಾರ್ಯಕ್ರಮದ ನಿರ್ಲಕ್ಷ್ಯವಲ್ಲ, ಹಿಂದೂ ಸಮಾಜದ ಭಾವನೆಗಳನ್ನು ಅವಮಾನಿಸಿದ ಕ್ರಮವಾಗಿದೆ ಎಂದು ವ್ಯಾಪಾರಸ್ಥರ ಮುಖಂಡ ಜಗದೀಶ ಕಂಠಿ ಕಿಡಿಕಾರಿದರು.
ಪಟ್ಟಣದ ಬಜಾರ್‌ನ ದುರ್ಗಾದೇವಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲಾದ ಬಣ್ಣದಾಟ ಕಾರ್ಯಕ್ರಮದ ಸಂದರ್ಭದಲ್ಲಿ ಉದಯರಶ್ಮಿ ದಿನಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಸಕ ನಾಡಗೌಡರು ಸಾರ್ವಜನಿಕ ವೇದಿಕೆಗಳಲ್ಲಿ ಎಲ್ಲ ಧರ್ಮಗಳೂ ಒಂದೇ ಎಂದು ಹೇಳುತ್ತಾ ಭಾವೈಕ್ಯತೆಯ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮದೇ ಧರ್ಮದ ಹಬ್ಬಕ್ಕೆ ಆಹ್ವಾನ ನೀಡಿದಾಗ ಅದನ್ನು ನಿರ್ಲಕ್ಷಿಸುವುದು ಅವರ ಮಾತು ಮತ್ತು ನಡೆ ನಡುವೆ ಇರುವ ವ್ಯತ್ಯಾಸವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಬಜಾರ್ ವ್ಯಾಪಾರಸ್ಥರು ಹಾಗೂ ಹಿಂದೂ ಸಮಾಜದ ಮುಖಂಡರು ಗೌರವಪೂರ್ವಕವಾಗಿ ಆಹ್ವಾನ ನೀಡಿದ್ದರೂ ಅದನ್ನು ಸ್ವೀಕರಿಸದೇ ಕಾರ್ಯಕ್ರಮವನ್ನು ಕಡೆಗಣಿಸಿರುವುದು ಇಡೀ ಬಜಾರ್ ಜನತೆಗೂ ಹಾಗೂ ಹಿಂದೂ ಸಮಾಜಕ್ಕೂ ಮಾಡಿದ ಅವಮಾನವಾಗಿದೆ. ಹಲವು ವರ್ಷಗಳಿಂದ ಈ ಹಬ್ಬವನ್ನು ಪಟ್ಟಣದಲ್ಲಿ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಎಲ್ಲ ಸಮುದಾಯದ ಜನರು ಸಹಭಾಗಿಯಾಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಸಂಪ್ರದಾಯವಿದೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಯಾಗಿರುವ ಶಾಸಕರು ಕಾರ್ಯಕ್ರಮಕ್ಕೆ ಬಾರದಿರುವುದು ಜನರ ಮನಸ್ಸಿಗೆ ನೋವುಂಟುಮಾಡಿದೆ ಎಂದರು.
ಜನಪ್ರತಿನಿಧಿಗಳು ಎಲ್ಲ ಸಮುದಾಯಗಳ ಭಾವನೆಗಳಿಗೆ ಗೌರವ ನೀಡಬೇಕು. ವಿಶೇಷವಾಗಿ ತಮ್ಮನ್ನು ಆಯ್ಕೆ ಮಾಡಿದ ಮತದಾರರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ನೀಡುವುದು ಅವರ ಕರ್ತವ್ಯ. ಆದರೆ ಶಾಸಕರು ಈ ಕಾರ್ಯಕ್ರಮವನ್ನು ನಿರ್ಲಕ್ಷಿಸಿರುವುದು ಸರಿಯಾದ ನಡೆ ಅಲ್ಲ ಎಂದು ಆಕ್ಷೇಪಿಸಿದರು.
ಹಿಂದೂ ಸಮಾಜದ ಭಾವನೆಗಳನ್ನು ಲೆಕ್ಕಿಸದೆ ವರ್ತಿಸಿದರೆ ಜನರು ಮೌನವಾಗಿ ಕುಳಿತುಕೊಳ್ಳುವುದಿಲ್ಲ. ಬರುವ ದಿನಗಳಲ್ಲಿ ಹಿಂದೂ ಸಮಾಜವೇ ಇದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಜಾರ್‌ನ ಅನೇಕ ವ್ಯಾಪಾರಸ್ಥರು ಹಾಗೂ ಯುವಕರು ಉಪಸ್ಥಿತರಿದ್ದು, ಶಾಸಕರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಂಗಿನಾಟ ಕಾರ್ಯಕ್ರಮವನ್ನು ಬಳಿಕ ಭಕ್ತಿಭಾವ ಹಾಗೂ ಉತ್ಸಾಹದೊಂದಿಗೆ ಮುಂದುವರಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.