Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು

ಯಶಸ್ಸಿನ ಕಹಿ ರಹಸ್ಯ!

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
ವಿಶೇಷ ಲೇಖನ

ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ:
-ಸಂತೋಷ್ ರಾವ್ ಪೆರ್ಮುಡ
ಪೆರ್ಮುಡ ಮನೆ
ಪಟ್ರಮೆ ಗ್ರಾಮ ಮತ್ತು ಅಂಚೆ
ಬೆಳ್ತಂಗಡಿ ತಾಲೂಕು,
ದ.ಕ ಜಿಲ್ಲೆ-೫೭೪೧೯೮
ದೂ: ೯೭೪೨೮೮೪೧೬೦

ಉದಯರಶ್ಮಿ ದಿನಪತ್ರಿಕೆ

ಜಗತ್ತಿನಲ್ಲಿ ಹಲವು ವಿಧದ, ಬಣ್ಣದ, ರೂಪದ, ಗಾತ್ರದ ಪಕ್ಷಿಗಳಿದ್ದು, ಅವೆಲ್ಲದರ ಪೈಕಿ ಅತ್ಯಂತ ಹೆಚ್ಚು ಅನಾದರಕ್ಕೆ ಒಳಗಾದ ಪಕ್ಷಿಯೆಂದರೆ ಕಾಗೆ.
ಬಣ್ಣದಲ್ಲಿ ಕಪ್ಪು, ಕೂಗಿನಲ್ಲಿ ಕರ್ಕಶ ಇವೆಲ್ಲಾ ಕಾರಣಗಳಿಂದ ಮನುಷ್ಯನಿಗೆ ಕಾಗೆಗಳೆಂದರೆ ಅಷ್ಟಕ್ಕಷ್ಟೇ. ಜಗತ್ತಿನ ಜೀವವಿಜ್ಞಾನಿಗಳು ಮತ್ತು ಮಹಾನ್ ಆಡಳಿತಗಾರನಾದ ಚಾಣಕ್ಯ ಹೇಳುವಂತೆ ಮನುಷ್ಯನು ಕಾಗೆಯನ್ನು ನೋಡಿಕೊಂಡು ಅದರಿಂದ ಕಲಿಯಬೇಕಾಗಿರುವುದು ಬಹಳಷ್ಟು ವಿಚಾರಗಳಿವೆ. ಅದರಲ್ಲೂ ಮುಖ್ಯವಾಗಿ ಕಾಗೆಯಲ್ಲಿ ಇರುವ ಯಶಸ್ಸಿನ ಗುಣಗಳನ್ನು ಎಲ್ಲರೂ ಕಲಿಯಲೇಬೇಕು. ಕಾಗೆಯಿಂದ ಕಲಿಯಬೇಕಾದ ಮೊದಲನೆಯ ಗುಣವೆಂದರೆ ಎಲ್ಲೂ ಕಾಗೆಯು ಬಹಿರಂಗವಾಗಿ ಮಿಲನವನ್ನು ನಡೆಸುವುದಿಲ್ಲ ಮತ್ತು ಅದನ್ನು ತೀರಾ

ಗುಪ್ತವಾಗಿರಿಸುತ್ತದೆ. ಮನುಷ್ಯ ಇದನ್ನು ಸರಿಯಾಗಿ ಅರಿತುಕೊಂಡರೆ ಮತ್ತು ಅದರ ಮೌಲ್ಯವನ್ನು ಅರಿತರೆ ಆತನಿಗೆ ಸಮಾಜದಲ್ಲಿ ಅಪಾರ ಗೌರವ ಪ್ರಾಪ್ತಿಯಾಗುತ್ತದೆ. ‘ಅನ್ನದ ಅಗುಳೊಂದ ಕಂಡರೆ ಕೂಗಿ ಕರೆಯದೇ ಕಾಗೆಯೊಂದು ತನ್ನ ಬಳಗವನ್ನು’ ಎಂಬ ಮಾತೇ ಇರುವಂತೆ ಕಾಗೆಯು ಒಂದು ತುತ್ತು ಆಹಾರ ಸಿಕ್ಕರೂ ಅದನ್ನು ತನ್ನ ಬಳಗದೊಂದಿಗೆ ಹಂಚಿಕೊಂಡು ತಿನ್ನುತ್ತದೆೆ. ಒಂದು ಅಗುಳು ಅನ್ನದ ಮೌಲ್ಯ ಹಾಗೂ ಹಸಿವಿನ ಬೆಲೆ ಕಾಗೆಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ತನಗೆ ಏನಾದರೂ ತಿನ್ನಲು ಸಿಕ್ಕರೆ ತಕ್ಷಣ ಅದು ತನ್ನ ಬಳಗವನ್ನೆಲ್ಲಾ ಕೂಗಿ ಕರೆದು ಅದನ್ನು ಹಂಚಿಕೊಂಡು ತಿನ್ನುತ್ತದೆ. ಆದರೆ ಮನುಷ್ಯನು ಸ್ವಾರ್ಥ ಜೀವಿಯಾಗಿದ್ದು, ತನಗೇನಾದರೂ ಸಿಕ್ಕರೆ ಅದು ತನಗೊಬ್ಬನಿಗೇ ಸೇರಬೇಕು ಎನ್ನುವ ಲಾಲಸೆಯ ಗುಣಕ್ಕೆ ಬದಲಾಗಿ ಎಲ್ಲರಿಗೂ ಹಂಚಿ ತಿನ್ನುವಂತಹ ವಿಭಿನ್ನವಾದ ಗುಣವನ್ನು ಹೊಂದಬೇಕು.
ಕಾಗೆಯ ಇನ್ನೊಂದು ವಿಶೇಷ ಗುಣವೆಂದರೆ ತನ್ನ ಶತ್ರುಗಳು ಯಾರಾದರೂ ತನ್ನ ಮೇಲೆ, ತನ್ನ ಮನೆಯ ಮೇಲೆ ಅಥವಾ ತನ್ನ ಕುಟುಂಬದ ಮೇಲೆ ದಾಳಿಯನ್ನು ಮಾಡಿದರೆ ಅಥವಾ ದಾಳಿ ಮಾಡುವ ಮುನ್ಸೂಚನೆ ದೊರೆತರೆ ಶತ್ರುಗಳ ಮೇಲೆ ಏಕಾಂಗಿಯಾಗಿಯೂ ಪ್ರತಿಯಾಗಿ ದಾಳಿ ನಡೆಸಿ ಅವರನ್ನು ಬಿಟ್ಟೂಬಿಡದೆ ಕಾಡಿ ಹೈರಾಣಾಗಿಸುತ್ತದೆ. ತನ್ನ ಹಾಗೂ ತನ್ನ ಕುಟುಂಬದ ರಕ್ಷಣೆಗೆ ತನಗೆ ಅಪಾಯವಿದ್ದರೂ ಕಾಗೆಯು ಭೀತಿಗೊಳ್ಳದೇ ಧೈರ್ಯದಿಂದ ಎದುರಾಳಿಯನ್ನು ಹಿಮ್ಮೆಟ್ಟಿಸುತ್ತದೆ. ಮನುಷ್ಯನೂ ಬದುಕಲ್ಲಿ ಎಂತಹ ಪರಿಸ್ಥಿತಿ ಬಂದರೂ ಧೈರ್ಯದಿಂದ ಅದನ್ನು ಎದುರಿಸುವಂತಹ ಮನೋಧೈರ್ಯವನ್ನು ಹೊಂದಬೇಕು. ಅದೇ ರೀತಿ ಕಾಗೆಯಲ್ಲಿರುವ ಮತ್ತೊಂದು ಗುಣವೆಂದರೆ ತನ್ನ ಬಳಿ ಇರುವ ಯಾವುದೇ ವಸ್ತುಗಳನ್ನು ಅದು ಬಹಳ ಜಾಗರೂಕತೆಯಿಂದ ಕಾಪಾಡಿಕೊಳ್ಳುತ್ತದೆ. ಕಾಗೆಯು ಯಾವುದೇ ವಸ್ತುವೂ ವ್ಯರ್ಥವಾಗಿ ಹಾಳಾಗಬಾರದು ಎಂದು ಅದನ್ನು ಅತ್ಯಂತ ಜತನದಿಂದ ಕಾಪಾಡಿಕೊಳ್ಳುತ್ತದೆ. ಅದೇ ರೀತಿ ಮನುಷ್ಯನೂ ಯಾವುದೇ ವಸ್ತುವನ್ನು ನಿರುಪಯುಕ್ತವೆಂದು ಕಸದ ಬುಟ್ಟಿಗೆ ಎಸೆಯುವ ಮೊದಲು ಹಲವು ಬಾರಿ ಯೋಚಿಸಬೇಕು ಮತ್ತು ಅದರ ಮರುಬಳಕೆಯ ಕುರಿತು ಕಾಳಜಿವಹಿಸಬೇಕು.
ಕಾಗೆಯ ಮತ್ತೊಂದು ಅದ್ಭುತವಾದ ಗುಣವೆಂದರೆ ಅದು ಯಾವತ್ತೂ ಮೈಮರೆತು ಇರದೇ ಸದಾ ಜಾಗೃತ ಸ್ಥಿತಿಯಲ್ಲಿ ಇರುತ್ತದೆ. ತನ್ನ ಮೇಲೆ ಯಾವ ದಿಕ್ಕಿನಿಂದ ಆಕ್ರಮಣ ನಡೆದರೂ ಅದನ್ನು ಎದುರಿಸಲು ಸದಾ ಜಾಗೃತ ಸ್ಥಿತಿಯಲ್ಲೇ ಇರುತ್ತದೆ ಮತ್ತು ತನ್ನ ಶತ್ರುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಇರುತ್ತದೆ. ಅದೇ ರೀತಿ ಮನುಷ್ಯನು ತನ್ನ ಸುತ್ತಮುತ್ತ ಇರುವ ಶತ್ರುಗಳು ಮತ್ತು ಸ್ನೇಹಿತರ ಕುರಿತು ಎಚ್ಚರಿಕೆಯಿಂದ ಇರಬೇಕು. ಕಾಗೆಯು ಯಾರನ್ನೂ ಅತಿಯಾಗಿ ನಂಬದೇ ಇರುವ ಪಕ್ಷಿ, ಕಾಗೆಯು ತನಗೆ ತಾನೆ ಸಾಟಿ ಎನ್ನುವಂತೆ ಸ್ವಸಾಮರ್ಥ್ಯವನ್ನು ನಂಬಿಕೊಂಡು ಜೀವಿಸುತ್ತದೆ. ಮನುಷ್ಯನೂ ಇದೇ ರೀತಿ ಎಲ್ಲಾ ವಿಚಾರಗಳಲ್ಲೂ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ಈ ವಿಶಿಷ್ಟ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸಿನೆಡೆಗೆ ಸಾಗಬಹುದು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು

ಯಶಸ್ಸಿನ ಕಹಿ ರಹಸ್ಯ!

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
  • ಯಶಸ್ಸಿನ ಕಹಿ ರಹಸ್ಯ!
    In ವಿಶೇಷ ಲೇಖನ
  • ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳು 371(ಜೆ) ಮೀಸಲಾತಿ ಒದಗಿಸಲು ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 26, 2026
    In ದಿನಪತ್ರಿಕೆ
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.