ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ ಘೋಷಣೆ ಸ್ವಾಗತಾರ್ಹವಾಗಿದೆ ಎಂದು ರಾಜ್ಯ ಬಜೆಟ್ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

