Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
(ರಾಜ್ಯ ) ಜಿಲ್ಲೆ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಈ ಬಜೆಟ್ನಲ್ಲಿ ವಿಜಯಪುರ ಮಹಾನಗರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಕೇಶವ ಪ್ರಸಾದ್ ಎಸ್. ಆರೋಪಿಸಿದ್ದಾರೆ.
ಶುಕ್ರವಾರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಯಾವಾಗ ಪ್ರಾರಂಭಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲ. ವಿಶೇಷವಾಗಿ ಕೃಷ್ಣ ಮೇಲ್ದಂಡೆ ಯೋಜನೆಗಳಿಗೆ ನಿರ್ದಿಷ್ಟವಾದ ಅನುದಾನವನ್ನು ಒದಗಿಸಿಲ್ಲ. ಕಳೆದ ಬಜೆಟ್ನಲ್ಲಿ ಘೋಷಿಸಲಾದ ಫುಡ್ಪಾರ್ಕ್ ಹಾಗೂ ದ್ರಾಕ್ಷಿ ಬೆಳೆಗಾರರ ಕೋಲ್ಡ್ ಸ್ಟೋರೇಜ್ ಪ್ರಗತಿಯಾಗಿಲ್ಲ, ಈ ಬಜೆಟ್ನಲ್ಲಿ ಯಾವುದೇ ಪ್ರಸ್ಥಾಪವಿಲ್ಲ. ಉತ್ತರ ಕರ್ನಾಟಕ ಭಾಗದ ಕ್ರೀಡೆಯ ಪ್ರೋತ್ಸಾಹಕ್ಕೆ ವಿಜಯಪುರ ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಹುಉಪಯೋಗಿ ಕ್ರೀಡಾಂಗಣವನ್ನು ನಿರ್ಮಿಸಲಾಗುವುದೆಂದು ಆಶಿಸಲಾಗಿತ್ತು, ಅದರ ಬಗ್ಗೆ ಈ ಬಜೆಟ್ನಲ್ಲಿ ಚಕಾರವಿಲ್ಲ. ಶ್ರೀ ಲಿಂ. ಶ್ರೀ ಸಿದ್ದೇಶ್ವರ ಶ್ರೀಗಳ ಅಧ್ಯಯನ ಕೇಂದ್ರ ಸ್ಥಾಪಿಸುವ ಯಾವುದೇ ಪ್ರಸ್ಥಾಪವಿಲ್ಲ. ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ವರ್ಷದಲ್ಲಿ ತರಗತಿ ಪ್ರಾರಂಭಿಸಲಾಗುವುದೆಂದು ಆಶಿಸಲಾಗಿತ್ತು. ವಿಜಯಪುರ ಮಹಾನಗರವು ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ಥಾಪವಿಲ್ಲದೆ ನಿರಾಸೆಯಾಗಿದೆ. ಜಿಲ್ಲೆಯಲ್ಲಿ ಉತ್ಕೃಷ್ಟ ಮಟ್ಟದ ದ್ರಾಕ್ಷಿ ಹಾಗೂ ಹತ್ತಿಯನ್ನು ಬೆಳೆಯಲಾಗುತ್ತಿದ್ದು, ವೈನ್ ಪಾರ್ಕ್ ಹಾಗೂ ಜವಳಿ ಪಾರ್ಕ್ ಸ್ಥಾಪನೆಯ ಬಗ್ಗೆ ಇದ್ದ ಕನಸುಗಳು ಬತ್ತಿಹೋಗಿವೆ. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅನುದಾನವನ್ನು ನೀಡಿ ಮಹಿಳಾ ಶಿಕ್ಷಣಕ್ಕೆ ಪೂರಕ ವಾತಾವರಣ ಸೃಷ್ಠಿಸಿಲ್ಲ. ಲಿಂಬೆ ಮುಂತಾದ ತೋಟಗಾರಿಕಾ ಬೆಳೆಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸಂಬಂಧಿಸಿದ ವಿಚಾರಗಳಿಗೆ ವಿಶೇಷ ಮಾರುಕಟ್ಟೆ ಸ್ಥಾಪನೆಯ ಬಗ್ಗೆ ಪ್ರಸ್ಥಾಪವಿಲ್ಲ ಎಂದು ಎಂಎಲ್ಸಿ ಕೇಶವಪ್ರಸಾದ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.