ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: TMG ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ, MPI ಪೇಮೆಂಟ್ ಮಣಿಪಾಲ , ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಶ್ರೀ ಕಾಯಕ ರತ್ನ ಮಹಿಳಾ ಸೇವಾ ಸಂಸ್ಥೆ, ಜಮಖಂಡಿ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಬಾಗಲಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಲಕಿ ಕ್ರಾಸ್ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕಾದರೆ ಜೀವನೋಪಾಯ ಕೌಶಲ್ಯಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರು ಹಾಕುವುದರ ಮೂಲಕ ಮುಖ್ಯ ವೈದ್ಯಾಧಿಕಾರಿ ಡಾ.ಮುಕುಂದ ಕಾಂಬಳೆ ಮಾಡಿದರು.
ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಕಾಯಕರತ್ನ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಯಶೋಧಾ ಲಮಾಣಿಯವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸುಧಾಕರ ಸಬಕಾಳೆ, ಗೋವಿಂದ ದಾಸರ, ಸೆಲ್ಕೊ ಸೋಲಾರ ಸಂಸ್ಥೆ ಬಾಗಲಕೋಟೆಯ ತರಬೇತಿ ಮುಖ್ಯ ವ್ಯವಸ್ಥಾಪಕ ಶಿವಕುಮಾರ ಕೆ. ಆನಂದ ತೆಲಸಂಗ ಅವರು ಮುಖ್ಯ ಅತಿಥಿಗಳ ಸ್ಥಾನವನ್ನು ವಹಿಸಿಕೊಂಡಿದ್ದರು.
ಕಾಶಿನಾಥ ಎಲ್ ಎಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕರಾದ ಸುಧಾಕರ ಸಬಕಾಳೆ ಮಾತನಾಡಿದರು.
ಸ್ವಾಗತವನ್ನು ಅಪ್ಪಾಸಾಬ ನದಾಫ ಮಾಡಿದರು.
ಪುಂಡಲಿಕ ಕಾಂಬಳೆ ನಿರೂಪಿಸಿದರು. ಅಶ್ವಿನಿ ಹರಿಜನ ವಂದಿಸಿದರು.

